ನಟ ಶಿವರಾಂರವರ ಅರೋಗ್ಯ ಪರಿಸ್ಥಿತಿ ಗಂಭೀರ

ಚಂದನವನದ ಹಿರಿಯ ನಟ ಶಿವರಾಂರವರ ಅರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದಾರೆ. “ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರ್ ಆಕ್ಸಿಡೆಂಟ್ ಆಗಿತ್ತು. ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದರು. ಆ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದರು. ಅದ್ರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ. ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದು ವರೆದಿದೆ” ಎಂದು ರವಿಶಂಕರ್ ಹೇಳಿದ್ದಾರೆ.

(ಸಂಗ್ರಹ ಚಿತ್ರ)

Leave a Comment

Your email address will not be published. Required fields are marked *

Translate »
Scroll to Top