ಕನ್ನಡ ವಿವಿಯಲ್ಲಿ ನೂತನ ಕಟ್ಟಡಗಳ ಉದ್ಘಾಟಿಸಿದ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ


ಹೊಸಪೇಟೆ(ವಿಜಯನಗರ): ಕನ್ನಡ ವಿಶ್ವವಿದ್ಯಾಲಯದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡಗಳನ್ನು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಶನಿವಾರ ಉದ್ಘಾಟಿಸಿದರು. ವಿವಿಯ ಮಂಟಪ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳಾದ ಓನಕೆ ಓಬವ್ವ ಅಧ್ಯಯನ ಕೇಂದ್ರ, ವಿದ್ಯಾರ್ಥಿಗಳು ಎರಡು ವಸತಿ ನಿಲಯಗಳು, ಪ್ರಸಾರಂಗದ ನವೀಕೃತ ಚಿತ್ತಾರ ಕಟ್ಟಡ,ಪತ್ರಿಕೋದ್ಯಮ ವಿಭಾಗದ ಕಟ್ಟಡಗಳನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ 128 ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ವಿವಿಯ ಸಂಚಾರ ಪುಸ್ತಕ ಮಾರಾಟ ವಾಹನವನ್ನು ಸಹ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಉನ್ನತ ಶಿಕ್ಷಣ,ಐಟಿ-ಬಿಟಿ,ವಿಜ್ಞಾನ- ತಂತ್ರಜ್ಞಾನ,ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರ ಡಾ.ಸಿ.ಎನ್.ಅಶ್ವಥ್ ನಾರಾಯಣ,ಮುಜರಾಯಿ,ಹಜ್ ಮತ್ತು ವಕ್ಪ್ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ,ಸಂಸದ ಅಣ್ಣಾಸಾಹೇಬ ಜೊಲ್ಲೆ,ಶಾಸಕರಾದ ಸೋಮಶೇಖರ್ ರೆಡ್ಡಿ, ವೈ.ಎಂ.ಸತೀಶ್, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ,ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಎಸ್ಪಿ ಡಾ.ಅರುಣ್ ಎಸ್.ಕೆ,
ಕುಲಸಚಿವ ಡಾ.ಎ.ಸುಬ್ಬಣ್ಣ ರೈ, ಪ್ರಸಾರಂಗ ವಿಭಾಗದ ನಿರ್ದೇಶಕರಾದ ಡಾ.ಶೈಲಜಾ ಎಂ.ಹಿರೇಮಠ, ವಿವಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಜೆ.ಎಸ್.ನಂಜಯ್ಯನವರ್ ಸೇರಿದಂತೆ ಅನೇಕರು ಇದ್ದರು.

ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ವಿವಿಗೆ ದೇಣಿಗೆಯಾಗಿ ನೀಡಿದ ಬಲ್ಡೋಟ ಗ್ರೂಪ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ನರೇಂದ್ರಕುಮಾರ್ ಬಲ್ಡೋಟ ಮತ್ತಿತರರು ಇದ್ದರು.

Leave a Comment

Your email address will not be published. Required fields are marked *

Translate »
Scroll to Top