ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಹಿನ್ನೆಲೆ ಫೆ.16ರಿಂದ 20 ರವರೆಗೆ ಮದ್ಯದ ಅಂಗಡಿಗಳು ಬಂದ್ : ಡಿಸಿ ಮಾಲಪಾಟಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಹಿನ್ನೆಲೆಯಲ್ಲಿ ಫೆ.೧೬ರ ಬೆಳಗ್ಗೆ ೦೬ರಿಂದ ಫೆ.೨೦ರ ಬೆಳಗ್ಗೆ ೬ರವರೆಗೆ ಹಡಗಲಿ ತಾಲೂಕಿನೊಂದಿಗೆ(ಮೈಲಾರ ಹಾಗೂ ಹೊಳಲು ಗ್ರಾಮಗಳಿಗೆ)ಹೊಂದಿಕೊಂಡಿರುವ ಸುತ್ತಮುತ್ತಲಿನ ೧೦ಕಿ.ಮೀ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಆದೇಶ ಹೊರಡಿಸಿದ್ದಾರೆ.ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಕಾರ್ಣಿಕೋತ್ಸವ ಫೆ.೦೮ ರಿಂದ ಫೆ.೧೯ರವರೆಗೆ ಜರುಗುತ್ತದೆ. ಫೆ.೧೮ರಂದು ಕಾರ್ಣಿಕೋತ್ಸವವನ್ನು ಪರಿಣಾಮಕಾರಿಯಾಗಿ ನೇರವೇರಿಸುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮತ್ತು ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಹಡಗಲಿ ತಾಲೂಕಿನೊಂದಿಗೆ (ಮೈಲಾರ ಹಾಗೂ ಹೊಳಲು ಗ್ರಾಮಗಳಿಗೆ) ಹೊಂದಿಕೊಂಡಿರುವ ಸುತ್ತಮುತ್ತಲಿನ ೧೦ ಕಿ.ಮೀ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಮದ್ಯದ ಅಂಗಡಿ, ಬಾರ್, ರೆಸ್ಟೋರೆಂಟ್ ಮತ್ತು ಇತರ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಮತ್ತು ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರ
ಈ ಆದೇಶವನ್ನು ಅನು?ನಕ್ಕೆ ತರಲು ಅಬಕಾರಿ ಇಲಾಖೆಯ ಉಪ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆಯನ್ನು ಆದೇಶದಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top