ಅವಳಿ ಜಿಲ್ಲೆಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರಗಳ ಆರಂಭ

ಬಳ್ಳಾರಿ: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದಿಂದ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು 2021-22ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‍ಗೆ ರೂ.5230ರಂತೆ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಬಳ್ಳಾರಿ,ಸಿರಗುಪ್ಪ ಮತ್ತು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಖರೀದಿ ಕೇಂದ್ರಗಳ ವಿವರ: ಬಳ್ಳಾರಿಯಲ್ಲಿ ರೈತ ಸೇವಾ ಸಹಕಾರ ಸಂಘ ನಿಯಮಿತ ಮತ್ತು ಮಾಹಿತಿಗಾಗಿ ಮಹಮ್ಮದ್ ಇಕ್ಬಾಲ್ ಮೊ.7019396399, ಸಿರುಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಮಾಹಿತಿಗಾಗಿ ಸಿ.ಬಸವರಾಜ್ ಮೊ.9845166601 ಹಾಗೂ ಹೂವಿನಹಡಗಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಮಾಹಿತಿಗಾಗಿ ಜಿ.ಕೆ.ಕೊಟ್ರೇಶ್ ಮೊ.9972356911ಗೆ ಭೇಟಿ ನೀಡಬಹುದು.
ಬೇಕಾದ ದಾಖಲೆಗಳು: 2021-22 ನೆ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರ್ಯೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‍ಐಡಿಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ ರೈತರ ಬಳಿ ಫ್ರ್ಯೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರ್ಯೂಟ್ಸ್‍ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿಯನ್ನು ಪಡೆಯಲು ತಿಳಿಸಿದೆ. ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರದ ಕಾರ್ಡ್‍ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಲು ತರುವುದು, ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಮಾ.30ರೊಳಗೆ ನೋಂದಣಿ ಮಾಡಿಸತಕ್ಕದ್ದು ಹಾಗೂ ನೋಂದಣಿ ಚೀಟಿ ಪಡೆಯುವುದು ಪ್ರತಿ ಎಕರೆಗೆ 04 ಕ್ವಿಂಟಾಲ್, ಗರಿಷ್ಠ ಪ್ರಮಾಣ ಹಾಗೂ ನಿಗದಿತ ಅವಧಿಯೊಳಗೆ ನೋಂದಣಿಗೊಂಡ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು, ಕಡಲೆಕಾಳು ಉತ್ಪನ್ನವನ್ನು ಮೇ14ರವರೆಗೆ ಬೆಳಿಗ್ಗೆ 9ರಿಂದ ಸಂಜೆ 6ರ ಒಳಗೆ ಮಾತ್ರ ಖರೀದಿಸಲಾಗುವುದು, ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು, ಕೋವಿಡ್-19 ಹರಡುವಿಕೆ ಹಿನ್ನಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವುದು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದ ಬಳ್ಳಾರಿ ಶಾಖಾ ವ್ಯವಸ್ಥಾಪಕರಾದ ಸೈಯದ್ ವಸೀಂ ಪಾಷ ದೂ.08392 200202 ಗೆ ಸಂಪರ್ಕಿಸಬಹುದಾಗಿದೆ.
ಬಳ್ಳಾರಿ ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ ಮತ್ತು ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು.
ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top