ರಾಜಕೀಯ

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ – ರಕ್ಷಾ ರಾಮಯ್ಯ: ವ್ಯಾಪಕ ಪ್ರಚಾರ

ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಂಪುರ, ಸೋಲೂರು ಹೋಬಳಿ ಭಾಗಗಳಲ್ಲಿ ತೀವ್ರ ಪ್ರಚಾರ ನಡೆಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಲ್ಲಿ ಬೆಲೆ ಏರಿಕೆಗೆ ಪರಿಹಾರ – ರಕ್ಷಾ ರಾಮಯ್ಯ

ನೆಲಮಂಗಲ: ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ನೆಲಮಂಗಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಬಿರುಬಿಸಿಲಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ನೆಲಮಂಗಲ ಕ್ಷೇತ್ರದ ಶಾಸಕ ಎನ್. ಶ್ರೀನಿವಾಸ್, ಬೆಮೆಲ್ ಕಾಂತರಾಜ್ ಅವರ ಸಾರಥ್ಯದಲ್ಲಿ ಪಕ್ಷದ ಪ್ರಮುಖ ಮುಖಂಡರು, ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳ ಜೊತೆ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸಿ ಮತಯಾಚಿಸಿದರು. ಮಾರುಕಟ್ಟೆ, ಅಂಗಡಿ ಮುಂಗಟ್ಟು ಮತ್ತಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು.
ಪ್ರತಿಯೊಂದು ಗ್ರಾಮದಲ್ಲೂ ರಕ್ಷಾ ರಾಮಯ್ಯ ಅವರನ್ನು ಜನತೆ ಪ್ರೀತಿಯಿಂದ ಸ್ವಾಗತಿಸಿದರು. ಮಹಿಳೆಯರು, ಹಿರಿಯ ನಾಗರಿಕರು ಸಹ ರಕ್ಷಾ ರಾಮಯ್ಯ ಅವರ ಜೊತೆ ಹೆಜ್ಜೆ ಹಾಕಿದರು.

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ : ಮೆರವಣಿಗೆಯಲ್ಲಿ ಭಾಗಿ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜ್ ಕುಮಾರ್ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಮೊದಲು ಒಂದು ಸೆಟ್ ನ ನಾಮಪತ್ರ ಸಲ್ಲಿಸಿದ್ದಾರೆ.
ನಂತರ ಮಾಧ್ಯಮಗಳಿಗೆ ಮಾತನಾಡಿದ ಅಭ್ಯರ್ಥಿ ಗೀತ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಗ್ಯಾರೆಂಟಿಯಿಂದಾಗಿ ಜನ ಕಾಂಗ್ರೆಸ್ ಗೆ ಮತಹಾಕಲಿದ್ದಾರೆ. ಹೋದಕಡೆಯಲ್ಲ ಮಹಿಳೆಯರು ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಶಿವಮೊಗ್ಗಕ್ಕೆ ಬಂದ ಮೇಲೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯವಾದರೂ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?ಮಾತನಾಡದಿದ್ದರೆ  ಲೋಕಸಭೆಗೆ ಯಾಕೆ  ಹೋಗಬೇಕು: ?*ಮುಖ್ಯಮಂತ್ರಿ  ಸಿದ್ದರಾಮಯ್ಯ

ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡ ಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ತುಮಕೂರು ಲೋಕಸಭಾ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿಯಾದ ಮುದ್ಧುಹನುಮೇಗೌಡ ಅವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮ ಅಭ್ಯರ್ಥಿಯ ಪರ ಮತದಾರರಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ತಿಗಳ ಸಮುದಾಯವನ್ನು ನಿಕೃಷ್ಟವಾಗಿ ಕಂಡ ಬಿಜೆಪಿ ಅಭ್ಯರ್ಥಿ ಸುಧಾಕರ್‌ಗೆ ಪಾಠ ಕಲಿಸುವುದಾಗಿ ಎಚ್ಚರಿಕೆ

ದೇವನಹಳ್ಳಿ: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ತಿಗಳ ಸಮುದಾಯದ ಮುಖಂಡರು ಮತ್ತು ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ತಪ್ಪಿಸಿ ಘೋರ ಅನ್ಯಾಯ ಮಾಡಿರುವ ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರನ್ನು ಬೆಂಬಲಿಸದಿರಲು ತಿಗಳ ಸಮುದಾಯ ತೀರ್ಮಾನಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಅಖಂಡ ಬೆಂಬಲ ನೀಡುವುದಾಗಿ ಘೋಷಿಸಿದೆ.
ದೇವನಹಳ್ಳಿಯಲ್ಲಿಂದು ಚಿಕ್ಕಬಳ್ಳಾಪುರ ಕ್ಷೇತ್ರ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ತಿಗಳ ಸಮುದಾಯದ ಮುಖಂಡರು ಸಭೆ ಸೇರಿ ಈ ನಿರ್ಧಾರ ಕೈಗೊಂಡಿದ್ದಾರೆ.

ತೇಜಸ್ವಿ ಸೂರ್ಯ ಚುನಾವಣಾ ಪ್ರಚಾರ ಸಭೆ

ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರನ್ನು ಬೆಂಬಲಿಸಿ ಕರೆದಿದ್ದ 25ಕ್ಕೂ ಹೆಚ್ಚಿನ ಬೆಂಗಳೂರು ಜಿಲ್ಲಾ ವ್ಯಾಪ್ತಿಯ ಸಹಕಾರ ಬ್ಯಾಂಕುಗಳ ಮತ್ತು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗಳ ನಿರ್ದೇಶಕರುಗಳ ಸಭೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ ಯಾಚಿಸಿದರು.

ಸಂವಿಧಾನ ಬದಲಿಸುವವರಿಗೆ ಮತದಾರರಿಂದ ತಕ್ಕ ಉತ್ತರ – ರಕ್ಷಾ ರಾಮಯ್ಯ

ದೇವನಹಳ್ಳಿ, ಏ, ೧೪; ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರ ಜೊತೆ ಡಾ.ಬಿ.ಆರ್.ಅಂಬೇಡ್ಕರ್ ಅವರಿಗ ಗೌರವ ಸಮರ್ಪಿಸಿದರು.
ದೇವನಹಳ್ಳಿಯ ತಾಲ್ಲೂಕು ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಶಿಲ್ಪಿಗೆ ನಮಿಸಿದರು.

ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಡಿಕೇರಿ,ಏ-14: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು

ಮಡಿಕೇರಿ ಏ 14: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ಸೀರಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ

ಹುಣಸೂರು ಏ 13 : ಮೋದಿ ಹುಟ್ಟಿಸಿದ ಭ್ರಮೆಗಳೆಲ್ಲಾ ಬೆತ್ತಲಾಗಿವೆ. ನೀವಿನ್ನೂ ಮೋದಿ ಭ್ರಮೆಯಲ್ಲಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಪ್ರಶ್ನಿಸಿದರು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಧ್ವನಿ-2 ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ದೇಶದ ಜನತೆ ಹೇಗೆ ಭ್ರಮೆಗೆ ಒಳಗಾಗಿ ಮೋಸಹೋದರು ಎನ್ನುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

Translate »
Scroll to Top