ರಾಜ್ಯ

ಮಾನ ಮರ್ಯಾದೆ ಬಿಟ್ಟು ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರ ಮನೆಗೆ ಹೋಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ಅಶೋಕ್

ಬೆಂಗಳೂರು : ಮಾನ ಮರ್ಯಾದೆ ಬಿಟ್ಟು ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಅವರ ಮನೆಗೆ ಹೋಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಮಲ್ಲೇಶ್ವರ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾನ ಮರ್ಯಾದೆ, ಗೌರವ ಇದ್ದಿದ್ದರೆ ಒಬ್ಬ ಸಿಎಂ ಆಗಿ ಹೋಗಬಾರದಾಗಿತ್ತು ಎಂದರು.
ಶ್ರೀನಿವಾಸ ಪ್ರಸಾದ್ ಅವರು ಇವತ್ತಿಗೂ ಬಿಜೆಪಿ ಸಂಸದರು.

ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು : ನಮ್ಮ ಸರ್ಕಾರದ ಬಳಿ 36 ++ ಸೀಟುಗಳಿವೆ. ಹೀಗಾಗಿ ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯುವುದಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಮಾಜಿ ಪ್ರಧಾನಿ ದೇವೇಗೌಡರು ನಿನ್ನೆ ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಇಲ್ಲ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದಾಗ ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ದೇವೇಗೌಡರು ಎಷ್ಟು ಭವಿಷ್ಯ ಕಾಲವನ್ನು ನೋಡಿದ್ದಾರೋ ನಾನು ಅಷ್ಟೇ ಭವಿಷ್ಯ ಕಾಲವನ್ನು ನೋಡಿದ್ದೇನೆ. ಅವರಿಗೆ 60 ವರ್ಷಗಳ ರಾಜಕೀಯದ ಅನುಭವವಿದ್ದರೆ, ನನಗೆ 40 ವರ್ಷಗಳ ರಾಜಕಾರಣದ ಅನುಭವವಿದೆ. “136 +++” ಸೀಟುಗಳು ನಮ್ಮ ಸರ್ಕಾರದ ಬಳಿ ಇವೆ. ಅವರು ತಮ್ಮ ಪಕ್ಷ ಜೀವಂತವಾಗಿ ಇರುತ್ತದೆಯೋ ಇಲ್ಲವೋ ಎಂಬುದನ್ನು ಮೊದಲು ಹೇಳಲಿ. ಜೆಡಿಎಸ್ ಬಿಜೆಪಿಯಲ್ಲಿ ವಿಲೀನವಾಗುತ್ತದೆಯೇ ಅಥವಾ ತನ್ನದೇ ಪ್ರತ್ಯೇಕ ಅಸ್ತಿತ್ವ ಉಳಿಸಿಕೊಳ್ಳಲಿದೆಯೇ ಎಂಬುದರ ಬಗ್ಗೆ ಜನರಿಗೆ ತಿಳಿಸಿಲಿ. ಅವರೇ ಕಟ್ಟಿದ ಪಕ್ಷ ಹಾಗೂ ಅದರ ಬಗ್ಗೆ ಅವರ ನಿಷ್ಠೆಯನ್ನು ನಾನು ಪ್ರಶ್ನೆ ಮಾಡುವುದಿಲ್ಲ. ನಮ್ಮ ಸರ್ಕಾರದ ಅಸ್ತಿತ್ವ ಪಕ್ಕಕ್ಕಿರಲಿ, ಅವರ ಪಕ್ಷದ ಅಸ್ತಿತ್ವವೇ ಈಗ ಇಲ್ಲವಲ್ಲ ಎಂದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮುಖಂಡರೂ ಮಾಜಿ ಸಚಿವರೂ ಆದ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮುಖಂಡರೂ ಮಾಜಿ ಸಚಿವರೂ ಆದ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಮಹಾತ್ಮಗಾಂಧಿ ನೇತೃತ್ಬದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು  ಕಾಂಗ್ರೆಸ್: ಬಿಜೆಪಿಯ ಒಬ್ಬ ದೇಶಕ್ಕಾಗಿ ಹುತಾತ್ಮರಾಗಿದ್ರೆ ತೋರಿಸಿ, ನಾನು ರಾಜಕೀಯ ಬಿಟ್ಟು ಬಿಡ್ತೀನಿ: ಸಿ.ಎಂ.ಸವಾಲು

ನಂಜನಗೂಡು: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಚಾಮರಾಜನಗರ ಲೋಕಾಭಾ ಕ್ಷೇತ್ರದ ನಂಜನಗೂಡಿನಲ್ಲಿ ನಡೆದ ಬೃಹತ್ ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿ – ಸಹಕಾರ ಸಚಿವ ಕೆ.ಎನ್. ರಾಜಣ್ಣ

ಚಿಕ್ಕಬಳ್ಳಾಪುರ: ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನವರು. ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿಯಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕರೆ ನೀಡಿದ್ದಾರೆ.

ರಂಗೇರಿದ ರಾಯಚೂರು ಚುನಾವಣಾ ಕಣ

ರಾಯಚೂರು: ಬಿಸಿಲ ನಾಡು ರಾಯಚೂರು ಜಿಲ್ಲೆಯಲ್ಲಿ ದಿನೇ ದೆನೇ ಬಿಸಿಲಿನ ಕಾವು ಏರಿಕೆಯಾಗುತ್ತಿದ್ದಂತೆ ಲೋಕಸಭಾ ಚುನಾವಣೆಯ ಕಾವು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉರಿ ಬಿಸಿಲಿನಲ್ಲಿ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಸಭೆ- ಸಮಾರಂಭ ನಡೆಸುವುದರಲ್ಲಿ ಬ್ಯುಸಿಯಾಗಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾದಿಂದ ಮಾತೃ ಸಮಾವೇಶ

ಬಳ್ಳಾರಿ : ಬಿಜೆಪಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ನಗರದ ಬಸವ ಭವನದಲ್ಲಿಂದು ಮಹಿಳಾ ಮಾತೃ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಭಾಗಿಯಾದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರದಿಂದ ಮಹಿಳೆಯರಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ. ಅಂತೆಯೇ ದೇಶದ ಶಾಂತಿ, ಸುಭದ್ರತೆಗಾಗಿ ಮೋದಿಯವನ್ನು ಮತ್ತೊಂದು ಅವಧಿಗೆ ಪ್ರಧಾನ ಮಂತ್ರಿಯನ್ನಾಗಿಸಬೇಕಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ನನಗೆ ಮತ ನೀಡಿದಲ್ಲಿ ಮೋದಿಯವರ ಕೈ ಬಲಪಡಿಸಿದಂತಾಗುತ್ತದೆ ಎಂದು ತಿಳಿಸಿದರು.

ಕೊಬ್ಬರಿ ಶೆಡ್‌ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಗುಬ್ಬಿ : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಬ್ಬರಿ ಶೆಡ್ಡು, ಟ್ರ್ಯಾಕ್ಟರ್ ಹಾಗೂ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರಿಂದ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ರಾಂಪುರದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ರೈತ ಮಹಿಳೆ ಶಿವಗಂಗಮ್ಮನವರು ಕುಟುಂಬ ಸಮೇತ ತೋಟದಲ್ಲಿ ವಾಸವಿದ್ದು, ಮನೆಯ ಸಮೀಪದಲ್ಲಿಯೇ ಕಾಯಿ ತುಂಬಲು ಶೆಡ್ಡು ನಿರ್ಮಿಸಿಕೊಂಡಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದು ಅಷ್ಟರೊಳಗೆ ಭಾಗಶಃ ಸುಟ್ಟು ಹೋಗಿದೆ.

ಕಾಂಗ್ರೆಸ್ ಮುಖಂಡರಿಂದ ಜೆಡಿಎಸ್  ಕಾರ್ಯಕರ್ತನ ಮೇಲೆ ಹಲ್ಲೆ

ಕುಣಿಗಲ್: ಜೆಡಿಎಸ್ ಕಾರ್ಯಕರ್ತ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಎನ್.ಡಿ.ಎ ಅಭ್ಯರ್ಥಿ ಡಾ|| ಮಂಜುನಾಥ್ ಪರವಾಗಿ ಪ್ರಚಾರ ಮಾಡುತ್ತಿದ್ದು, ಈ ಬಗ್ಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡರು ಅಂಚೆಪಾಳ್ಯಕ್ಕೆ ಬರುವಂತೆ ಕರೆದು ಹಲ್ಲೆ ನಡೆಸಿರುವ ಘಟನೆ ಬುಧವಾರ ರಾತ್ರಿ ಅಂಚೆಪಾಳ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಮೋದಿ ಕೈ ಬಲಪಡಿಸಲು ಸೋಮಣ್ಣರನ್ನು ಗೆಲ್ಲಿಸಿ’

ತುಮಕೂರು: ಕ್ಷೇತ್ರದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಉತ್ಸಾಹ ಕಂಡು ಹುಮ್ಮಸ್ಸು ಬಂದಿದೆ. ಎನ್.ಡಿ.ಎ ಅಭ್ಯರ್ಥಿ ಸೋಮಣ್ಣ ಅವರು ಎರಡು ಲಕ್ಷಗಳ ಮತಗಳ ಅಂತರದಿಂದ ಚುನಾಯಿತರಾಗಿ ಲೋಕಸಭೆ ಪ್ರವೇಶಿ ಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಕೆಸ್ತೂರಿನಲ್ಲಿ ಗುರುವಾರ ನಡೆದ ಬಿಜೆಪಿ, ಜೆಡಿಎಸ್ ಪಕ್ಷಗಳ ಸಮಾವೇಶದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ನಡುವೆ ಆತ್ಮೀಯತೆ ಇದೆ. ಈ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಆಶೀ ರ್ವಾದ ಸೋಮಣ್ಣರಿಗೆ ಸಿಕ್ಕಿದೆ, ಎರಡೂ ಪಕ್ಷಗಳ ಕಾರ್ಯಕರ್ತರ ಬೆಂಬಲ ದೊರಕಿದೆ. ಇದರೊಂದಿಗೆ ಸೋಮಣ್ಣ ಚುನಾವಣೆಯಲ್ಲಿ ಜಯಗಳಿಸುತ್ತಾರೆ, ಸೋಮಣ್ಣ ಎಂದರೆ ಅಭಿವೃದ್ಧಿ, ಅಭಿ ವೃದ್ಧಿ ಎಂದರೆ ಸೋಮಣ್ಣ ಎಂದು ಹೇಳಿದರು.

Translate »
Scroll to Top