ಜಿಲ್ಲೆಗಳು

ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ

ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ರೈತರ ಸಮಸ್ಯೆಗಳ ಗಮನಹರಿಸದ ರಾಜಕೀಯ ಪಕ್ಷಗಳ ಮುಖಂಡರಿಗೆ ಛೀ ಮಾರಿ  ಹಾಕಿದ ರೈತ ಮುಖಂಡರು

ಬಳ್ಳಾರಿ : ಕುಡಿಯುವ ನೀರು, ದನಕರುಗಳಿಗೆ ಮೇವು, ಕೃಷಿ ಪಂಪ್ಸೆಟ್ಟುಗಳಿಗೆ ವಿದ್ಯುತ್ ಸಮಸ್ಯೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ರಾಜ್ಯದಲ್ಲಿನ ರೈತರನ್ನ ಸಂಕಷ್ಟಕ್ಕೀಡುಮಾಡಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.

ತೂಬಗೆರೆಯ ವೆಂಕಟೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಭಾಗಿ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಪರಸ್ಪರ ಮುಖಾಮುಖಿಯಾದರು.

ಭಕ್ತಿ ಶ್ರದ್ಧೆಯಿಂದ ಜರುಗಿದ ಆದಿಚುಂಚನಗಿರಿ ರಥೋತ್ಸವ

ನಾಗಮಂಗಲ : ಇತಿಹಾಸ ಪ್ರಸಿದ್ಧ, ಪುಣ್ಯಕ್ಷೇತ್ರ ತಾಲೂಕಿನ ಆದಿಚುಂಚನಗಿರಿಯಲ್ಲಿ ಸೋಮವಾರ ಮುಂಜಾನೆ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾ ರಥೋತ್ಸವ ಹಾಗೂ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಲಕ್ಷಾಂತರ ಭಕ್ತರ ನಡುವೆ ಬಹಳ ವಿಜೃಂಭಣೆಯಿಂದ ನೆರವೇರಿತು.

ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷದಿಂದ 28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ

ಬಳ್ಳಾರಿ : 2025ರ ಲೋಕಸಭಾ ಚುನಾವಣೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಬಿ) ಭಾರತದ ಹಲವಾರು ರಾಜ್ಯಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧಿಸಲಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ. ಚುನಾವಣೆಯ ಪೂರ್ವ ತಯಾರಿಗಾಗಿ 7 ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ ಎಂದು ಆರ್.ಪಿ.ಐನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಡಿಎಸ್ಎಸ್ನ ರಾಜ್ಯಾಧ್ಯಕ್ಷ ಡಾ.ಎನ್. ಮೂರ್ತಿ ತಿಳಿಸಿದರು.

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಳ್ಳಾರಿ,ಮಾ.25: 2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯ ತಿಳಿಸಿದರು.

ಸಂಡೂರು ಶಾಸಕ ತುಕಾರಾಂಗೆ ಕಾಂಗ್ರೆಸ್ ಟಿಕೆಟ್..?

ಬಳ್ಳಾರಿ : ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕಗ್ಗಂಟು ಇದೀಗ ಸಡಿಲಗೊಂಡಿದೆ ಎಂತಲೂ, ಎಲ್ಲರ ಸರ್ವ ಸಮ್ಮತ ಅಭಿಪ್ರಾಯದಂತೆ, ನಾಲ್ಕು ಬಾರಿ ಸಂಡೂರು ಶಾಸಕರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿರುವ ಶಾಸಕ ಇ.ತುಕಾರಾಂ ಅವರ ಹೆಸರು ಫೈನಲ್ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಕೋಲಾರ ಕ್ಷೇತ್ರದಲ್ಲಿ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಿ – ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಆಗ್ರಹ

ಬೆಂಗಳೂರು : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್ ಗೆ ಒತ್ತಾಯಿಸಿದೆ.

ಪವರ್ ಸ್ಟಾರ್ ಯುವಕರ ಪಾಲಿನ ಕಣ್ಮಣಿ: ಬಿ.ಶ್ರೀರಾಮುಲು

ಬಳ್ಳಾರಿ : ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಕರೆಂಟ್ ಅಂತಲೇ ಕರೆಯಿಸಿಕೊಳ್ಳುತ್ತಿದ್ದವರು ಪುನೀತ್ ರಾಜ್ಕುಮಾರ್ ಎಂದು ಬಳ್ಳಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಹೇಳಿದರು.

ಬಳ್ಳಾರಿಯ ರಾಯರ ಮಠಕ್ಕೆ ಬಿ.ಶ್ರೀರಾಮುಲು ಭೇಟಿ

ಬಳ್ಳಾರಿ :ಶ್ರೀರಾಘವೇಂದ್ರ ಗುರುಸಾರ್ವಭೌಮರ 403ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 429 ವರ್ಧಂತಿ ಉತ್ಸವದ ಅಂಗವಾಗಿ ಮಾರ್ಚ್ 11ರಿಂದ ಇಂದಿನವರೆಗೂ ರಾಯರ ಮಠದಲ್ಲಿ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ನಡೆಯಿತ್ತೀದ್ದು ಬಿಜೆಪಿ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಭೇಟಿ ನೀಡಿದರು.

Translate »
Scroll to Top