ಬೆಂಗಳೂರು ಗ್ರಾಮಾಂತರ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ,ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ದ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರ ನೀಡುತ್ತಾರೆ ಎಂದು ನಂಬಿದ್ದೇನೆ.

ಕಾರ್ಮಿಕರನ್ನು ರಕ್ಷಿಸಿದ ಕನ್ನಡಿಗರಿಂದ ಯಶೋಗಾಥೆ ಅನಾವರಣ

ಧರಣಿ ಜೀಯೊಟೆಕ್ ಇಂಜನಿಯರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ 20 ಸದಸ್ಯರು ಕಾರ್ಯಾಚರಣೆಯಲ್ಲಿ ಭಾಗಿ
ಬೆಂಗಳೂರು, ಡಿ, 13; ಉತ್ತರಾಖಂಡದ ಉತ್ತರ ಕಾಶಿ ಜಿಲ್ಲೆಯ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಕರೆ ತರಲು ಕಾರಣರಾದ ಸಂಸ್ಥೆಯ ಧರಣಿ ಜೀಯೊಟೆಕ್ ಇಂಜನಿಯರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕನ್ನಡದ ಸಿಬ್ಬಂದಿ ಸಾಹಸ ಮೆರೆದಿದ್ದು, ಕಾರ್ಯಾಚಣೆಯಲ್ಲಿ ಭಾಗಿಯಾಗಿದ್ದ ಸದಸ್ಯರು ತಮ್ಮ ಯಶೋಗಾಥೆಯನ್ನು ಅನಾವರಣಗೊಳಿಸಿದರು.

ತ್ಯಾಗ ಬಲಿದಾನದಿಂದ ವಿಶಾಲ ಕರ್ನಾಟಕ ರೂಪುಗೊಂಡಿತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ: ಸಿಎಂ ಭರವಸೆ
ಬೆಳಗಾವಿ ಡಿ 12 : ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ ನಾಡು ಉದಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಛರಿಸಿದರು.
ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೃಂದ ಮತ್ತು ನೇಮಕಾತಿ(ಸಿ ಅಂಡ್ ಆರ್) ನಿಯಮಗಳಿಗೆ ತಿದ್ದುಪಡಿ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಳಗಾವಿ,; ಸ್ವಾಯತ್ತ ಸರ್ಕಾರಿ ವೈದ್ಯಕೀಯ ವಿಜ್ಞಾನ ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳಿಗೆ ಮುಂಬಡ್ತಿ ಮತ್ತು ನೇಮಕಾತಿ ನೀಡುವ ಕುರಿತು ಹಾಲಿ ಇರುವ ವೃಂದ ಮತ್ತು ನೇಮಕಾತಿ( ಸಿ ಅಂಡ್ ಆರ್) ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೋಮವಾರ ವಿಧಾನಪರಿಷನಲ್ಲಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ  ಹಿರಿಯ ನಟಿ ಡಾ. ಲೀಲಾವತಿ ಅವರಿಗೆ ಸಂತಾಪ

ವಿಧಾನಪರಿಷತ್ತಿನಲ್ಲಿ ಹಿರಿಯ ನಟಿ ಡಾ. ಲೀಲಾವತಿ ಅವರಿಗೆ ಸಂತಾಪ
ಸೂಚಿಸುವ ನಿರ್ಣಯಕ್ಕೆ ಬೆಂಬಲ ಸೂಚಿಸಿ ವಿಧಾನಪರಿಷತ್ತಿನ ಸಭಾನಾಯಕರು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿದರು. 600 ಚಲನ ಚಿತ್ರಗಳಲ್ಲಿ ನಟಿಸಿದ್ದ ಮೇರು ನಟಿ ಲೀಲಾವತಿ ಅವರು ಸಾಮಾಜಿಕ ಕಳಕಳಿಯಿಂದ ಹಲವಾರು ಸಮಾಜ ಸೇವೆಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ  ಉತ್ತರ ಕೊಡಲು ಸರ್ಕಾರ ಸಿದ್ಧವಿದೆ.: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 11: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು.

ಕ್ಯಾನರಿಸ್‌ ಆಟೋಮೇಷನ್ಸ್‌ ಸಂಸ್ಥೆಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ: ಕನ್ನಡದ ವಾತಾವರಣ ನಿರ್ಮಾಣಕ್ಕೆ ಐಟಿ ಸಂಸ್ಥೆ ಒತ್ತು

ಬೆಂಗಳೂರು; ನಗರದ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆ ಕ್ಯಾನರಿಸ್ ಆಟೋಮೇಷನ್ಸ್ ಲಿಮಿಟೆಡ್ ನಿಂದ ಎನ್.ಆರ್. ಕಾಲೋನಿಯ ಪತ್ತಿ ಸಭಾಂಗಣದಲ್ಲಿ ಅದ್ದೂರಿಯಾಗಿ ೧೫ ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಪ್ರತಿವರ್ಷ ವೈವಿಧ್ಯಮಯವಾಗಿ ರಾಜ್ಯೋತ್ಸವ ಆಚರಿಸುತ್ತಿರುವ ಐಟಿ ಸಂಸ್ಥೆ ಕ್ಯಾನರಿಸ್, ಈ ಬಾರಿಯೂ ಕನ್ನಡ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಮಾಡಿದೆ. ಕ್ಯಾನರಿಸ್ ಮೇಳದಲ್ಲಿ ಹಾಡು, ಹರಟೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಐಟಿ ಸಂಸ್ಥೆಯಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುತ್ತಿದ್ದು, ಕನ್ನಡಿಗರಿಗೆ ಉದ್ಯೋಗ, ಕನ್ನಡ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದೆ.

ಐಐಎಚ್‌ಎಂಆರ್‌ ನ 19 ನೇ ವಾರ್ಷಿಕೋತ್ಸವ: ಆರೋಗ್ಯ ವಲಯದ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಅಗತ್ಯ – ಡಾ. ನೀತು ಕುಮಾರಿ ಸಿಂಗ್‌

ಬೆಂಗಳೂರು; ಆಧುನಿಕ ಜಗತ್ತಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ಸೂಕ್ತ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ರಿಲಸಿ ಹೆಲ್ತ್ ಕೇರ್ ನಿರ್ದೇಶಕಿ ಡಾ.ನೀತು ಕುಮಾರಿ ಸಿಂಗ್ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರಿಗೆ C M ಸಿದ್ದರಾಮಯ್ಯ ಗೌರವ ನಮನ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Translate »
Scroll to Top