ರಾಮನಗರ

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಗೋ ರಕ್ಷಕ ದಳದ ಸದಸ್ಯರ ಮೇಲೆ ಹಲ್ಲೆ

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ ವಿರುಧ್ದ ಕ್ರಮ ಕೈಗೊಳ್ಳದ ಪೊಲೀಸರ ನಡವಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ರುವ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ರಾಜ್ಯ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಅವರಿಗೆ, ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಭಾನುವಾರ ದಿನದಂದು. ಗೋ ರಕ್ಷಕ ಸಂಸ್ಥೆಯ (ಗೋ ಗ್ಯಾನ್ ಫೌಂಡೇಶನ್) ಸ್ವಯಂಸೇವಕರು, ಚನ್ನಪಟ್ಟಣದ ಹೊರ ವಲಯದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಸಾಯಿಖಾನೆ ಬಗ್ಗೆ ಪೊಲೀಸರ ಗಮನಕ್ಕೆ …

ಗೋ ರಕ್ಷಕ ದಳದ ಸದಸ್ಯರ ಮೇಲೆ ಹಲ್ಲೆ Read More »

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. …

ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read More »

ದಬ್ಬಾಳಿಕೆ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ

ರಾಮನಗರ : ಕುಟುಂಬ ಮತ್ತು ವಂಶಪಾರಂಪರ್ಯ ಪಕ್ಷವಲ್ಲದ ಏಕೈಕ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸೂಕ್ತ ಸ್ಥಾನ ಸಿಗಬೇಕೆಂದು ನಮ್ಮ ಪಕ್ಷದ ಸಿದ್ದಾಂತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು. ನಗರದ ಆರ್ ವಿಸಿಎಸ್ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಕೃತಿಯ‌ ಸಂಪತ್ತನ್ನು‌ ಲೂಟಿ‌ ಹೊಡೆದವರು ಜಿಲ್ಲೆಯಲ್ಲಿ ರಾಜಕಾರಣ ಮಾಡುತ್ತಿದ್ದು, …

ದಬ್ಬಾಳಿಕೆ ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿ Read More »

ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಕಾವೇರಿ ತಟ ಸಂಗಮದಲ್ಲಿ ಚಾಲನೆ

ರಾಮನಗರ : ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಶನಿವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ‌ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಅನುಷ್ಠಾನ ಗೊಳಿಸುವ ಬದ್ದತೆ ಇರುವುದು ಕುಮಾರಸ್ವಾಮಿ ಅವರಿಗೆ ಮಾತ್ರ. ಇದರಿಂದಾಗಿ ರಾಜ್ಯದ ಜನರ ಕುಡಿಯುವ ನೀರಿನ ಬವಣೆ ನೀಗಲು ಮತ್ತು ರೈತರ ಬದುಕು ಹಸನಾಗಲು ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿ‌ ಅವರಿಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದರು. …

ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಕಾವೇರಿ ತಟ ಸಂಗಮದಲ್ಲಿ ಚಾಲನೆ Read More »

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ರಾಮನಗರ: ಗುತ್ತಿಗೆದಾರ ಸಂತೋಷ್‌ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಚನ್ನಪಟ್ಟಣದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವಾ ನಾಳೆ ರಾಜೀನಾಮೆ ಕೊಡಬಹುದು. ಅವರ ಹೈಕಮಾಂಡ್ ಈ ಬಗ್ಗೆ ಹೇಳುತ್ತಾರೆ ಅನ್ನಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಮೊದಲು ಅವರು ರಾಜೀನಾಮೆ ನೀಡುವುದು ಸೂಕ್ತ” ಎಂದರು. …

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ಸೂಕ್ತ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ Read More »

ಕಿಡಿಗೇಡಿಗಳು ಹೊಟ್ಟೆಪಾಡಿಗೆ ದೇಶವನ್ನು ಹಾಳು ಮಾಡುತ್ತಿದ್ದಾರೆ

ರಾಮನಗರ: ಸಮಾಜದ ಶಾಂತಿ ಕದಡುತ್ತಿರುವ ಹಿಂದೂ ಪರಿಷತ್, ಭಜರಂಗದಳದ ಕೆಲ ಕಿಡಿಗೇಡಿಗಳು ನಿಜಕ್ಕೂ ಸಮಾಜಘಾತುಕರು. ದಿನ ಬೆಳಗಾದರೆ ಕರಪತ್ರಗಳನ್ನು ಹಂಚುತ್ತಾ ಜನರ ಮನಸ್ಸನ್ನು ಕೆಡಿಸುತ್ತಿರುವ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಹಿಂಸೆ ಹಾಗೂ ಶಾಂತಿಗೆ ಭಂಗ ತರುತ್ತಿರುವ ಸಂಘಟನೆಗಳ ವಿರುದ್ಧ ಕಿಡಿಕಾರಿದರು. ದಿನ ಬೆಳಗಾದರೆ ತಹಸೀಲ್ದಾರ್ ಬಳಿ ಹೋಗಿ ಅರ್ಜಿ ಕೊಡೋದು, ಅಂಗಡಿಗಳಿಗೆ …

ಕಿಡಿಗೇಡಿಗಳು ಹೊಟ್ಟೆಪಾಡಿಗೆ ದೇಶವನ್ನು ಹಾಳು ಮಾಡುತ್ತಿದ್ದಾರೆ Read More »

ಮೇಕೆದಾಟು ಪಾದಯಾತ್ರೆ

ರಾಮನಗರ.ಫೆ, 27 : ಮೇಕೆದಾಟು ಪಾದಯಾತ್ರೆಯಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೊತೆಯಾಗಿ ಹೆಜ್ಜೆ ಹಾಕಿದ ಸಂದರ್ಭ.

Translate »
Scroll to Top