ಶಿವಮೊಗ್ಗ

ಬಿಜೆಪಿ ನಿಯೋಗದಿಂದ ಪುನೀತ್ ಕೆರೆಹಳ್ಳಿ ಆರೋಗ್ಯ ವಿಚಾರಣೆ

ಬೆಂಗಳೂರು: ತಮ್ಮ ಮೇಲಿನ ಆರೋಪಗಳ ಕುರಿತ ದಾಖಲೆ ನೀಡಲು ರಾಜ್ಯದ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಿಜೆಪಿ ನಿಯೋಗವು ಭೇಟಿ ಮಾಡಿ ಆರೋಗ್ಯ ವಿಚಾರಿಸಿತು. ಅಲ್ಲದೆ ಅವರಿಗೆ ಧೈರ್ಯ ತುಂಬಿತು.

ಅಕ್ಟೋಬರ್ 5 ರಂದು ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ – ನಳಿನ್‍ಕುಮಾರ್ ಕಟೀಲ್

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ಶ್ರೀ ನಳಿನ್ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಗಲಭೆ ನಡೆದ ರಾಗಿಗುಡ್ಡÀಕ್ಕೆ 5.10.2023ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಬೆಳೆ ಸಮೀಕ್ಷೆ ಮತ್ತು ಗ್ರೌಂಡ್ ಟ್ರುತಿಂಗ್ ವಾರದಲ್ಲಿ ಮುಗಿಸಿ ವರದಿ ಸಲ್ಲಿಸಿ

ಶಿವಮೊಗ್ಗ: ರಾಜ್ಯ ಸರ್ಕಾರ ಬರ ಘೋಷಣೆಗೆ ಸಿದ್ದತೆ ನಡೆಸುತ್ತಿದ್ದು, ಜಿಲ್ಲೆಯಾದ್ಯಂತ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಮತ್ತು ಗ್ರೌಂಡ್ ಟ್ರುತಿಂಗ್ ( ಬೆಳೆ ಪರಿಶೀಲನೆ ) ನಡೆಸಿ ವಾರಾಂತ್ಯದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚಿಸಿದ ಬಿಜೆಪಿ ನಾಯಕಿ

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಸರಕಾರಿ ಕೆಲಸ ಮತ್ತು ಟೆಂಡರ್ ಕೊಡಿಸುವುದಾಗಿ ಬಿಜೆಪಿ ನಾಯಕಿಯೊಬ್ಬರು ಮೂವರಿಗೆ ಬರೋಬ್ಬರಿ 14 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.

ಶಿವಮೊಗ್ಗ- ಬೆಂಗಳೂರು: ಗುರುವಾರದಿಂದ (ಆ.31) ವಿಮಾನಯಾನ ಸೇವೆ ವಿಧ್ಯುಕ್ತ ಆರಂಭ

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರವನ್ನು ತಲುಪಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಕಾವೇರಿ ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಚಾಟಿ ಬೀಸಿದ ಹೆಚ್.ಡಿ.ಕುಮಾರಸ್ವಾಮಿ

: ನೆರೆ ರಾಜ್ಯವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದಾಕ್ಷಣ ರಾಜ್ಯ ಸರಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಮಿಳುನಾಡು ಅರ್ಜಿಗೆ ಪ್ರತಿಯಾಗಿ ಕೂಡಲೇ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರಕಾರದಿಂದ ಲೋಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಮಾತುಗಳಲ್ಲಿ ಹೇಳಿದರು.

ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಆದೇಶ

ಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Translate »
Scroll to Top