ವೀಡಿಯೊಗಳು

ಸರ್ಕಾರಗಳನ್ನು ಬದಲಿಸುವ ಶಕ್ತಿ ಮಹಿಳೆಯರಿಗಿದೆ: ಸಚಿವ ಬಿ.ನಾಗೇಂದ್ರ

ಬಳ್ಳಾರಿ: ಮಹಿಳೆಯರಿಗೆ ಎಲ್ಲದಕ್ಕಿಂತ ಮುಖ್ಯ ಕುಟುಂಬದ ಸದಸ್ಯರ ಕಾಳಜಿ, ತಮ್ಮೆಲ್ಲ ಸಮಯವನ್ನು ಕುಟುಂಬದ ಹಿತಕ್ಕೆ ಮೀಸಲಿಡುವ ಮಹಿಳೆಯರ ಬದ್ಧತೆಯ ಪ್ರತೀಕವೇ ನಾರಿ ಶಕ್ತಿ ಕಾರ್ಯಕ್ರಮ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಹೇಳಿದರು.

ಮಕ್ಕಳಿಗೆ 5 ವರ್ಷದಲ್ಲಿ 7 ಬಾರಿ ಲಸಿಕೆ ಹಾಕಿಸಿರಿ: ಮೇಯರ್ ಡಿ.ತ್ರಿವೇಣಿ

ಹುಟ್ಟಿನಿಂದ 05 ವರ್ಷ ವಯಸ್ಸು ತುಂಬುವವರೆಗೆ ಮಕ್ಕಳಿಗೆ ಏಳು ಬಾರಿ ಲಸಿಕೆ ಹಾಕಿಸಲು ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಬರುವುದು ಮರೆಯಬಾರದು ಎಂದು ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ತಾಯಂದಿರಿಗೆ ವಿನಂತಿಸಿದರು.

2024ಕ್ಕೆ ಬಿಜೆಪಿ ಮುಕ್ತ ಭಾರತವಾಗುವುದು ಗ್ಯಾರಂಟಿ…!: ಸಂತೋಷ್ ಲಾಡ್

ಬಳ್ಳಾರಿ : ಕಾರ್ಮಿಕ ಸಚಿವನಾದ ನಂತರ ಮೊದಲ ಬಾರಿ ಬಳ್ಳಾರಿಗೆ ಜಿಲ್ಲೆಗೆ ಭೇಟಿ ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, 2024ಕ್ಕೆ ಬಿಜೆಪಿ ಮುಕ್ತ ಭಾರತವಾಗುವುದು ಗ್ಯಾರೆಂಟಿ ಎಂದು ಘಂಟಾಘೋಷವಾಗಿ ಹೇಳಿದ್ದಾರೆ.             ವಿವಿಧ ಕಾರ್ಯಕ್ರಮಗಳ ನಿಮಿತ್ತ ಬಳ್ಳಾರಿಗೆ ಆಗಮಿಸಿದ್ದ ಸಚಿವ ಸಂತೋಷ್ ಲಾಡ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ನಗರಕ್ಕೆ ಆಹ್ವಾನಿಸಿದರು. ಇದೇ ವೇಳೆ ನಗರದ ಎಸ್‍ಪಿ ವೃತ್ತದಲ್ಲಿ ಬೃಹತ್ ಗಾತ್ರದ ಹೂಮಾಲೆ ಹಾಕುವ ಮೂಲಕ …

2024ಕ್ಕೆ ಬಿಜೆಪಿ ಮುಕ್ತ ಭಾರತವಾಗುವುದು ಗ್ಯಾರಂಟಿ…!: ಸಂತೋಷ್ ಲಾಡ್ Read More »

ಈ ಹಿಂದೆಯೂ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ

ಬಳ್ಳಾರಿ: ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಿದ್ದು, ಇದೇ ಮೊದಲ ಬಾರಿಗೆ ‘ಮೈತ್ರಿ ಆಗುತ್ತಿಲ್ಲ, ಈ ಹಿಂದೆಯೂ ಕೂಡಾ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಒಳ್ಳೆಯ ಸರ್ಕಾರ ನೀಡಿದ್ದೇವೆ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬಳ್ಳಾರಿಯಲ್ಲಿ ತಾಂತ್ರಿಕ ಕಾಲೇಜು ಸ್ಥಾಪನೆಗೆ 5 ಎಕರೆ ಜಾಗ ಮೀಸಲು

ಬಳ್ಳಾರಿ: ಜಿಲ್ಲೆಯಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ನೀಡಲು ಬಳ್ಳಾರಿಯಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜು ಸ್ಥಾಪನೆಗೆ 5 ಎಕರೆ ಜಾಗ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.

ನಗರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಕೆ ಹೆಚ್ಚಿನ ಆದ್ಯತೆ ನೀಡಿ : ಸಚಿವ ಬಿ.ನಾಗೇಂದ್ರ

ಬಳ್ಳಾರಿ: ನಗರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಕೆ ಹೆಚ್ಚಿನ ಆದ್ಯತೆ ನೀಡಿ ಬಳ್ಳಾರಿ ನಗರವನ್ನು ಸುಂದರವಾಗಿಡಲು ಪಾಲಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

ಸೆ.3 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಚಿವರು, ಶಾಸಕರಿಗೆ ಸನ್ಮಾನ ಸಮಾರಂಭ

ಬಳ್ಳಾರಿ: ಶ್ರೀಮದ್ ಜಗದ್ಗುರು ಚಿನ್ಮೂಲಾದ್ರಿ ಶಿಲಾಪುರಿ ಸೂರ್ಯ ಸಿಂಹಾಸನ ಭಗೀರಥ ಪೀಠ ಮಹಾಸಂಸ್ಥಾನ ಬ್ರಹ್ಮ ವಿದ್ಯಾನಗರ, ಸುಕ್ಷೇತ್ರ ಮಧುರೆ ಹೊಸದುರ್ಗದಲ್ಲಿ ಸೆ.3ರಂದು ರಾಜ್ಯ ಮಟ್ಟದ ದ್ವಿತೀಯ ಪಿಯುಸಿ, ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಚಿವರು, ಶಾಸಕರಿಗೆ ಹಾಗೂ ಹಿರಿಯ ಅಧಿಕಾರಿಗಳಿಗೆ, ನಿವೃತ್ತಿ ಪಡೆದ ಅಧಿಕಾರಿಗಳಿಗೆ, ವಿಶೇಷ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಶ್ರೀ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಹನುಮೇಶ್ ಉಪ್ಪಾರ್ ಅವರು ಹೇಳಿದರು.

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸರ್ಕಾರ

ಬೆಂಗಳೂರು: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಅವರ ಹುಟ್ಟುಹಬ್ಬದ ಸ್ಮರಣೆಯಲ್ಲಿ ಆಚರಿಸುವ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಇದೇ ಪ್ರಥಮ ಬಾರಿಗೆ ವಿವಿಧ ಆಟೋಟಗಳ ಆಯೋಜನೆಯನ್ನು ಮಾಡಲಾಗಿದೆ.

ಕನ್ನಡ ಚಲನಚಿತ್ರಗಳನ್ನು ಚಿತ್ರಮಂದಿರಗಳಲ್ಲಿಯೇ ನೋಡಿ

ಬಳ್ಳಾರಿ: ಕನ್ನಡ ಚಲನಚಿತ್ರವನ್ನು ಮೊಬೈಲ್ ಗಳಲ್ಲಿ ನೋಡದೇ ಚಿತ್ರಮಂದಿರದಲ್ಲಿ ನೋಡಿ ಕನ್ನಡ ಚಿತ್ರರಂಗವನ್ನು ಬೆಳೆಸಬೇಕಾಗಿದೆ ಎಂದು ಮಾರಕಾಸ್ತ್ರ ಚಿತ್ರದ ನಿರ್ದೇಶಕರಾದ ಗುರುಮೂರ್ತಿ ಅವರು ಹೇಳಿದರು.

ಯಶಸ್ವಿಯಾಗಿ ಜರುಗಿದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ, ನಗರದ ಅವ್ವಂಭಾವಿ ರಸ್ತೆಯಲ್ಲಿರುವ ಕೆಆರ್ಪಿ ಪಕ್ಷದ ಕಾರ್ಯಾಲಯದ ಬಳಿಯ ಮೈದಾನದಲ್ಲಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಅದ್ದೂರಿಯಾಗಿ, ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು. 36 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ವೈವಾಹಿಕ ಜೀವನಕ್ಕೆ ಕಾಲಿಟ್ಟರು.

Translate »
Scroll to Top