ದೇವನಹಳ್ಳಿ : ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕ ಸಮಸ್ಯೆ ಪರಿಹರಿಸಲು ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ದೇವನಹಳ್ಳಿ ತಾಲ್ಲೂಕಿನಾದ್ಯಂತ ಆಗಸ್ಟ್16 ರಿಂದ ಸೆಪ್ಟೆಂಬರ್ 16ವರೆಗೆ ಹಮ್ಮಿಕೊಳ್ಳಲಾಗಿರುವ ಕಾರ್ಮಿಕ ಅದಾಲತ್ ಕುರಿತ ಪ್ರಚಾರ ವಾಹನಕ್ಕೆ ದೇವನಹಳ್ಳಿ ತಾಲ್ಲೂಕು ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಮಧುಸೂದನ್ ಡಿ.ಎಲ್. ಮತ್ತು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಸಂದೇಶ್ ಕೆ.ಎನ್ ಅವರು ತಾಲ್ಲೂಕು ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು.

ಸೆಪ್ಟೆಂಬರ್ 1 ರಿಂದ 5 ರವರೆಗೆ ವಾಹನದ ಮೂಲಕ ಪ್ರಚಾರ ನಡೆಯಲಿದ್ದು, ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಮತ್ತು ಸ್ವೀಕೃತಿ ಪತ್ರ ಹಾಗೂ ಬ್ಯಾಂಕ್ ವಿವರಗಳನ್ನು ದೇವನಹಳ್ಳಿ ತಾಲ್ಲೂಕು ಮಿನಿ ವಿಧಾನಸೌಧದ ಎರಡನೇ ಮಹಡಿಯಲ್ಲಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಸಲ್ಲಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬಹುದು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್. ಆರ್.ನಾಗೇಂದ್ರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್, ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಅಂಬಿಕಾ, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಕಾರ್ಯಕ್ರಮ ಅಧಿಕಾರಿ ಕರಿಯಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.