ಚಿಕ್ಕಮಗಳೂರುಜಿಲ್ಲೆಗಳು

ಬೆಳ್ಳಂಬೆಳಗ್ಗೆ ಆನೆದಾಳಿಗೆ ಇಬ್ಬರು ಬಲಿ

ಕಡಬ:

ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ್ದು, ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಮೃತರನ್ನು ರಮೇಶ್ ರೈ (50) ಮತ್ತು ರಂಜಿತಾ (23) ಎಂದು ಗುರುತಿಸಲಾಗಿದೆ.

ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೂ ಆನೆ ದಾಳಿ ನಡೆಸಿದ್ದು, ಆನೆಯ ಅಟ್ಟಹಾಸಕ್ಕೆ ರಮೇಶ್ ರೈ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಗಂಭೀರವಾಗಿ ಗಾಯಗೊಂಡಿದ್ದ ರಂಜಿತಾ ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply