ಫೋಟೋ ಕಾಲಂಬೆಂಗಳೂರುರಾಜ್ಯ

ಜೂನ್ 7 ರವರೆಗೆ ಲಾಕ್ ಡೌನ್ ವಿಸ್ತರಣೆ : ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಮೇ 24 ರಿಂದ ಮತ್ತೆ 14 ದಿನಗಳ ಕಾಲರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ವಿಸ್ತರಿಸಿ ಇಂದು ಪ್ರಕಟಿಸಿದ್ದಾರೆ. ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಮೇ. 24ಕ್ಕೆ ಮುಗಿಯಲಿದ್ದು, ಮತ್ತೆ ಅಲ್ಲಿಂದ ಜೂನ್ 7 ರ ಬೆಳಗ್ಗೆ 6 ಗಂಟೆ ತನಕ ಕಠಿಣ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

ನಿವಾಸ ಕಾವೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಕಠಿಣ ನಿರ್ಬಂಧವನ್ನು ಮುಂದುವರಿಸಲಾಗಿದೆ. ಹೀಗಾಗಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಅವರು ಹೇಳಿದ್ದಾರೆ.

ಕೋವಿಡ್ ಹಳ್ಳಿಗಳಿಗೆ ಹೆಚ್ಚಾಗಿ ಹರಡಿದೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಮುಂದುವರಿಕೆ ತೀರ್ಮಾನ ಮಾಡಲಾಗಿದೆ. ಕಠಿಣ ನಿರ್ಬಂಧ ಹೇರಿಕೆ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಜನರು ಈ ಕಠಿಣ ನಿರ್ಬಂಧಗಳನ್ನು ಪಾಲಿಸಬೇಕು.

ಇನ್ನು ಜನರು ಭಯಗೊಂಡಿರುವ ಬ್ಲ್ಯಾಕ್ ಫಂಗಸ್ ರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತೇವೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ಸಿಎಂ ಘೋಷಿಸಿದರು. ಹಿಂದಿನ ಮಾರ್ಗಸೂಚಿ ನಿಯಮಗಳೇ ಮುಂದುವರಿಯಲಿವೆ ಎಂದು ಬಿಎಸ್ವೈ ತಿಳಿಸಿದರು. ಬೆಳಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರಬರದೇ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗ್ಗೆ 10 ಗಂಟೆಯ ನಂತರವೂ ಜನ ಅನಗತ್ಯವಾಗಿ ಓಡಾಡುತ್ತಿರುವುದು ಕಂಡು ಬರುತ್ತಿದೆ. ಜನ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಈಗ ಜಾರಿಯಲ್ಲಿರುವ ನಿಯಮವಾದ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮುಂದುವರೆಯಲಿದೆ. ಈಗ ಜಾರಿಯಲ್ಲಿರುವ ಎಲ್ಲಾ ಲಾಕ್ಡೌನ್ ನಿಯಮಗಳೂ ಜೂನ್ 7ರವರೆಗೆ ಮುಂದುವರೆಯಲಿದೆ. ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್ ಪಡೆಯುವವರು, ತುರ್ತು ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.

ಜೂನ್ 7ರವರೆಗೆ ಬಸ್ ಸಂಚಾರ, ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಇರಲಿದೆ. ಮಾಲ್, ಚಿತ್ರಮಂದಿರಗಳು, ಪಾರ್ಕ್ಗಳು, ಈಜುಕೊಳಗಳನ್ರನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.ಇನ್ನು ರಾಜ್ಯದಲ್ಲಿಂದೂ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳ ಅವಧಿಯಲ್ಲಿ 32,218 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ರಾಜ್ಯಾದ್ಯಂತ ಬರೋಬ್ಬರಿ 353 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇನ್ನು ಇಂದು 52,581 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 9,591 ಮಂದಿ ಕೋವಿಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. 26,956 ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜನ ಜವಾಬ್ದಾರಿ ಮರೆಯದೇ ಮಾಸ್ಕ್ನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಕೊರೋನಾ ವ್ಯಾಕ್ಸಿನ್ ಪಡೆಯುವ ಮೂಲಕ ಕೊರೋನಾ ವಿರುದ್ಧದ ಯುದ್ಧದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ


ಕಠಿಣ ಕ್ರಮ: ಎಚ್ಚರಿಕೆ

ಮೇ. 24 ರಿಂದ ಜೂನ್ 7 ರವರೆಗೆ ಹಳೆಯ ಮಾರ್ಗಸೂಚಿಗಳು ಮುಂದುವರಿಯಲಿವೆ ಜನರು ಅನಗತ್ಯವಾಗಿ ರಸ್ತೆಗಿಳಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೋಲಿಸರಿಗೆ ಅಧಿಕಾರ ನೀಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯ ಒಳಗೆ ಅವಕಾಶ ಮಾಡಿಕೊಡಲಾಗಿದೆ ಜನರು 9.45 ರ ಒಳಗೆ ಮನೆ ಸೇರಿಕೊಳ್ಳಬೇಕು ನಿಯಮ ಉಲ್ಲಂಘಿಸಿ ಓಡಾಡಿದರೆ ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸೋಂಕು ನಿಯಂತ್ರಣಕ್ಕೆ ಬರುತ್ತಿದೆ:

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತವೆ ಅದನ್ನು ಇನ್ನಷ್ಟು ಕಡಿಮೆ ಮಾಡುವ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ ಮಾಡುವುದಾಗಿ ಅವರು ತಿಳಿಸಿದ್ದಾರೆ. ಬೆಳಗ್ಗೆ ಹತ್ತು ಗಂಟೆಯ ನಂತರವೂ ಜನರು ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡುವುದು ಕಂಡುಬರುತ್ತಿದೆ ಇಂತಹದನ್ನು ಇನ್ನು ಮುಂದೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಹೀಗಾಗಿ ಜನರು ನಿಯಮಗಳನ್ನು ಪಾಲಿಸಬೇಕು ಇಲ್ಲದಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply