Criminal

ಪಿಎಫ್‍ಐ ಮಾಸ್ಟರ್ ಮೈಂಡ್ ಬಂಧಿಸಿದ ಎನ್‍ಐಎ ಅಧಿಕಾರಿಗಳು

ಬಳ್ಳಾರಿ: ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದಲ್ಲಿ ಮಾರು ವೇಷದಲ್ಲಿ ಪ್ರಂಬರ್ ಕೆಲಸ ಮಾಡುತ್ತಿದ್ದ ನಿಷೇಧಿತ ಪಿಎಫ್ ಐ ಸಂಘಟನೆಯ ಮಾಸ್ಟರ್ ಮೈಂಡ್, ವೆಪನ್ ಟ್ರೈನರ್ 33 ವರ್ಷದ ಮೊಹಮ್ಮದ್ ಯೂನಸ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಅನಧಿಕೃತ ಬಡಾವಣೆಗಳ ತೆರವು ಕಾರ್ಯಾಚರಣೆ

ಬಳ್ಳಾರಿ: ಅನಧಿಕೃತ ಬಡಾವಣೆಗಳು ನಿರ್ಮಿಸುವವರು ಕೂಡಲೇ ಸ್ವಯಂ ಪ್ರೇರಿತವಾಗಿ ಅನಧಿಕೃತ ಬಡಾವಣೆಗಳನ್ನು ತೆರವುಗೊಳಸಿ, ಪ್ರಾಧಿಕಾರಕ್ಕೆ ವಿನ್ಯಾಸ ಅನುಮೋದನೆಗಾಗಿ ಅರ್ಜಿಸಲ್ಲಿಸಬೇಕು ಎಂದು ಬುಡಾ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅನಧಿಕೃತ ವಿನ್ಯಾಸ ತೆರವುಗೊಳಿಸುವುದಲ್ಲದೇ ಬಡಾವಣೆ ರಚಿಸುವ ಮಾಲೀಕರ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸಹಾ ಹೂಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಪ್ರಾಧಿಕಾರದಿಂದ ಸುಸಜ್ಜಿತ ಬಡಾವಣೆಗಳನ್ನು ನಿರ್ಮಿಸುವುದಲ್ಲದೇ ಅನಧಿಕೃತ ಬಡಾವಣೆಗಳನ್ನು ತಡೆಗಟ್ಟುವ ಕಾರ್ಯವು ಸಹಾ ಪ್ರಾಧಿಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಈ ಕಾರ್ಯದಡಿ ತೆರವು ಕಾರ್ಯಾಚರಣೆ ಕೈಗೊಂಡಿದ್ದು, …

ಅನಧಿಕೃತ ಬಡಾವಣೆಗಳ ತೆರವು ಕಾರ್ಯಾಚರಣೆ Read More »

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದೆ

ಬೆಂಗಳೂರು,ಫೆ, 25 : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತ ವಾತಾವರಣ ನಿರ್ಮಾಣವಾಗುತ್ತಿದೆ. ಈಗಿನ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದು ಒಂದು ಅನೈತಿಕ ಸರ್ಕಾರವಾಗಿ ನಡೀತಾ ಇದೆ. ಕಳೆದ ಎರಡೂವರೆ ವರ್ಷಗಳಿಂದ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಹೀಗಾಗಿ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಜನ ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ನಿಷ್ಕ್ರಿಯ, ಭ್ರಷ್ಟ ಸರ್ಕಾರ.ಸರ್ಕಾರ ಕೊವಿಡ್ 19 ಅನ್ನು ಕೂಡ ಸರಿಯಾಗಿ …

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದೆ Read More »

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ

ಶಿವಮೊಗ್ಗ,ಫೆ,22 : ಈಗಾಗಲೇ ರಾಜ್ಯಾದ್ಯಂತ ಹಿಜಾಬ್ ಕುರಿತ ವಿವಾದದ ಮೂಲಕ ಶಿವಮೊಗ್ಗ ನಗರ ಬಹುದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಇದರ ನಡುವೆ ಭಜರಂಗದಳ ಕಾರ್ಯಕರ್ತನ ಭೀಕರ ಕೊಲೆ ಪರಿಸ್ಥಿತಿ ಜನರಲ್ಲಿ ಮತ್ತಷ್ಟು ಆತಂಕವನ್ನು ತಂದಿದೆ. ಸದ್ಯ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.ಭಾನುವಾರ ರಾತ್ರಿವರೆಗೂ ಶಿವಮೊಗ್ಗ ತಣ್ಣಗಿತ್ತು. ರಾತ್ರಿ ಸುಮಾರು ೯.೩೦ರ ಸಮಯದಲ್ಲಿ ಈ ರಕ್ತಪಾತದ ಪ್ರಕರಣ ನಡೆದಿದೆ.

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಬೆದರಿಕೆ : ಅಪರಾಧಿಗೆ ಶಿಕ್ಷೆ

 ಚಾಮರಾಜನಗರ, ಜನವರಿ.29:- ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಬಲವಂತ ಪಡಿಸಿದಲ್ಲದೇ ಪ್ರೀತಿಸದಿದ್ದಲ್ಲಿ  ನಿನ್ನ ಅಣ್ಣನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 22 ದಿನ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. 

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಬೆಂಗಳೂರು, ಜನವರಿ, ೨೦: ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿಗಳ ವಿರುದ್ದ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು, ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ಸಚಿವರು, ಇಂದು, ನಗರದಲ್ಲಿ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ, ರೂ ೭.೪೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಇತ್ತೀಚಿಗೆ ಮಾನ್ಯ ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು, ನಿಷೇಧಿತ …

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ Read More »

Translate »
Scroll to Top