election

ನಾಳೆ ಬಳ್ಳಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ಬಳ್ಳಾರಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಏ.12ರಂದು ಬಳ್ಳಾರಿ ನಗರಕ್ಕೆ ಆಗಮಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮಠ, ಮಂದಿರಗಳಿಗೆ ರಕ್ಷಾ ರಾಮಯ್ಯ ಭೇಟಿ

ನೆಲಮಂಗಲ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಂದು ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಮಠ ಮಂದಿಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಲಾಲ್ ಭಾಗ್ ನಲ್ಲಿ ವಾಕರ್ಸ್ ಬಳಿ ಲೋಕಸಭಾ ಅಭ್ಯರ್ಥಿ  ಸೌಮ್ಯರೆಡ್ಡಿ ಮತಯಾಚನೆ

ಬೆಂಗಳೂರು : ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿರವರು ಲಾಲ್ ಭಾಗ್ ಅವರಣದಲ್ಲಿ ಮತಯಾಚನೆ ಮಾಡಿದರು, ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ತೇಜಸ್ವಿನಿ ಆನಂತ್ ಕುಮಾರ್ ರವರು ಮುಖಾಮುಖಿಯಾದರು

ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ

ರಾಮನಗರ : ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಳ್ಳಾರಿ,ಮಾ.25: 2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ. ದೇಶದ 19 ರಾಜ್ಯ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷವು 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸುತ್ತಿದೆ ಎಂದು ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯ ತಿಳಿಸಿದರು.

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಬೈಕ್, ಬೈಸಿಕಲ್ ಮತ್ತು ವಾಕರ್ಸ್ ಸೇರಿ‌ ಸಾವಿರಾರು ಜನ ಭಾಗಿ, ಅರ್ಥಪೂರ್ಣ ಮಹಿಳಾ ದಿನಾಚರಣೆ.

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬಿಬಿಎಂಪಿ ಮತ್ತು ನಗರದ ಕಾವೇರಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ವಿಶೇಷ ವಾಕಾಥಾನ್ನಲ್ಲಿ ಸಾವಿರಾರು ಹೆಣ್ಣುಮಕ್ಕಳು, ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿದರು.

ಹೋಟೆಲ್ ನಲ್ಲಿ ಶಾಸಕರಿಗೆ ಮತದಾನ ತರಬೇತಿ ಮತ್ತು ಅಣಕು ಮತದಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :  “ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.   ಹಿಲ್ಟನ್ ಹೋಟೆಲ್ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. “ಇಂದು ಅಣಕು ಮತದಾನ ನಡೆಸಿ, ನಾಳೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ” ಎಂದು ತಿಳಿಸಿದರು.   ನಾಳೆ ಮತದಾನದ ವೇಳೆ ಅಡ್ಡಮತದಾನ ನಡೆಯಲಿದೆಯೆ ಎಂದು ಕೇಳಿದಾಗ, “ನಮ್ಮ …

ಹೋಟೆಲ್ ನಲ್ಲಿ ಶಾಸಕರಿಗೆ ಮತದಾನ ತರಬೇತಿ ಮತ್ತು ಅಣಕು ಮತದಾನ: ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಚಂಡೀಗಢ ಮೇಯರ್‌ ಚುನಾವಣೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ ತೀರ್ಪು ಐತಿಹಾಸಿಕ

ಬೆಂಗಳೂರು: ಚಂಡೀಗಢ ಮೇಯರ್‌ ಚುನಾವಣೆಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ ತೀರ್ಪು ಕೇವಲ ಚಂಡೀಗಢ ನಿವಾಸಿಗಳಿಗೆ ಸಿಕ್ಕಿದ ಗೆಲುವಲ್ಲ, ಭಾರತಕ್ಕೆ ಸಂದ ಗೆಲುವಾಗಿದೆ. ಪ್ರಜಾಪ್ರಭುತ್ವಕ್ಕೆ ಸಿಕ್ಕಿದ ವಿಜಯವಾಗಿದೆ. ಇದೊಂದು ಐತಿಹಾಸಿಕ ತೀರ್ಪು. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಸಮಸ್ತ ಭಾರತೀಯರ ಗೆಲುವಾಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ

ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು.

Translate »
Scroll to Top