kannadanadu news

ಬಳ್ಳಾರಿ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ಎಂ.ಮೇತ್ರಿ ನೇಮಕ

ಬಳ್ಳಾರಿ : ಬಳ್ಳಾರಿ ವಿವಿಯ ಕುಲಪತಿಗಳಾಗಿದ್ದ ಸಿದ್ದು ಪಿ ಅಲಗೂರು ಅವರು ನಿವೃತ್ತಿ ಹೊಂದಿದ ನಂತರ ಸರಿ ಸುಮಾರು ಆರೇಳು ತಿಂಗಳ ಕಾಲ ಪ್ರಭಾರಿ ಕುಲಪತಿಗಳೇ ಆಡಳಿತ ನಡೆಸುತ್ತಿದ್ದರು. ಈ ಸ್ಥಾನ ಭರ್ತಿ ಮಾಡಲು ಇದೀಗ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ.

ಅನುಷ್ಠಾನ ಸಮಿತಿಗಳ ರಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಸಚಿವ ಶರಣಪ್ರಕಾಶಗೆ ಅಭಾವೀಮ ವತಿಯಿಂದ ಸನ್ಮಾನ

ಬಳ್ಳಾರಿ: ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ವಿಮ್ಸ್) ಭೇಟಿ ನೀಡಿದ್ದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಗೌರ್ವಪೂರ್ವಕವಾಗಿ ಸನ್ಮಾನಿಸಲಾಯಿತು.

ಶಿರೋಳ ಮಠದ ಸಾಧನೆ ಅನನ್ಯ: ಡಾ. ಬಿ. ಎಂ. ಉಮೇಶ್ ಕುಮಾರ್

ಬೆಂಗಳೂರು: ದೇಶದ ಧಾರ್ಮಿಕ ಇತಿಹಾಸದಲಿ ರೈತರ ಹಾಗೂ ಯೋಧರ ಪಾದಪೂಜೆ ಮಾಡುವ ಏಕೈಕ ಜಾತ್ರಾ ಮಹೋತ್ಸವ ಎಂಬ ಖ್ಯಾತಿ ಗಳಿಸಿರುವ ಗದಗ ಜಿಲ್ಲೆ ನರಗುಂದ ತಾಲ್ಲೂಕಿನ ಶಿರೋಳದ ಜಗದ್ಗುರು ಯಚ್ಚರಸ್ವಾಮಿಗಳ ಜಾತ್ರಾ ಮಹೋತ್ಸವ (ಅಜ್ಜನ ಜಾತ್ರೆ) ಐದು ದಿನಗಳ ಕಾಲ ಅತ್ಯಂತ ಶ್ರದ್ಧಾಭಕ್ತಿಯಿಂದ ಸಹಸ್ರಾರು ಭಕ್ತರ ಸಮಾಗಮದೊಂದಿಗೆ ಯಶಸ್ವಿಯಾಗಿ ನೆರವೇರಿತು.

ಹುಲಿ ಉಗುರು: ನಟ ಜಗ್ಗೇಶ್ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ಹುಲಿ ಉಗುರು ಲಾಕೆಟ್ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ವಿರುದ್ಧ ದೂರು ದಾಖಲಾಗಿದೆ.

‌ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ

ಬೆಂಗಳೂರು: ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ನೇರ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯೊತ್ಸವ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲು ಎಡಿಸಿ  ಸೂಚನೆ

ಬಳ್ಳಾರಿ: ಕರ್ನಾಟಕ ರಾಜ್ಯ ಎಂದು ಹೆಸರನ್ನು ಮರುನಾಮಕರಣ ಮಾಡಿ, ನವೆಂಬರ್ 1 ಕ್ಕೆ 50 ವರ್ಷಗಳು ತುಂಬಲಿವೆ, ಈ ಹಿನ್ನಲೆಯಲ್ಲಿ ಈ ವರ್ಷ ಅದ್ದೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಸೂಚಿಸಿದರು.

ಮಕ್ಕಳಲ್ಲಿ ನೀರಿನ ಉಳಿತಾಯದ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆಗೆ ಚಿಂತನೆ

ಬೆಂಗಳೂರು: ನೀರಿನ ಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಇಸ್ರೇಲ್ ದೇಶ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಉತ್ತಮ ಫಲಿತಾಂಶವನ್ನು ಕಂಡುಕೊಂಡಿದೆ. ಇದೇ ಮಾದರಿಯಲ್ಲಿ ರಾಜ್ಯ ಅಂತರ್ಜಲ ಅಭಿವೃದ್ದಿ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆ ನಡೆಸುವುದಾಗಿ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಬೋಸರಾಜು ತಿಳಿಸಿದರು.

Translate »
Scroll to Top