Karnataka

ಕೋಮು ರಾಜಕಾರಣ ನಮ್ಮದಲ್ಲ  :   ಧ್ವನಿ ಎತ್ತಿದ  ಬ್ರಾಹ್ಮಣ ಸಮುದಾಯ 

ಮಂಗಳೂರು : ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ , ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ ವಿರುದ್ಧ ಧ್ವನಿಯೆತ್ತಿದ್ದಾರೆ. ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ ಇತ್ತೀಚಿನ ವರ್ಷಗಳಿಂದ ಬಿಜೆಪಿ ಬ್ರಾಹ್ಮಣ ನಾಯಕತ್ವಕ್ಕೆ ಮಣೆ ಹಾಕಿದ್ದು ಹೆಚ್ಚು . ಇದು ಬ್ರಾಹ್ಮಣ ಸಮುದಾಯ ಬಿಜೆಪಿಯತ್ತ ವಾಲಲು ಮುಖ್ಯ ಕಾರಣವಾಗಿತ್ತು.

ನಾಳೆ ಬಳ್ಳಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ಬಳ್ಳಾರಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಏ.12ರಂದು ಬಳ್ಳಾರಿ ನಗರಕ್ಕೆ ಆಗಮಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ರಾಜ್ಯ ಸರಕಾರದ ಐಟಿ ವಿರೋಧಿ ನೀತಿ: ಎಸ್. ದತ್ತಾತ್ರಿ

ಬೆಂಗಳೂರು: ಕರ್ನಾಟಕ ಸರಕಾರವು ಐಟಿ ಕ್ಷೇತ್ರಕ್ಕೆ ವಿರುದ್ಧವಾದ ನೀತಿ ಅನುಸರಿಸುತ್ತಿದೆ. ಇವತ್ತು ಎಲ್ಲ ಐಟಿ ಬಾಂಧವರ ಸ್ಥಿತಿ ಚಿಂತಾಜನಕವಾಗಿದೆ. ಇದು ಅತ್ಯಂತ ಖೇದಕರ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಅವರು ಟೀಕಿಸಿದರು.

ಚಾರಿತ್ರಿಕ ಉದ್ಯೋಗ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

BJP ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ನೀಡಿದರು.

ನಮ್ಮ ಸರ್ಕಾರವು ಇಡೀ ದೇಶಕ್ಕೆ “ಕರ್ನಾಟಕ ಮಾದರಿ” ಪರಿಚಯಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ನಮ್ಮ ಸರ್ಕಾರ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಯನ್ನು ಪರಿಚಯಿಸಿದೆ. ಬಸವಣ್ಮನವರ ನುಡಿದಂತೆ ನಡೆಯಬೇಕು ಎನ್ನುವ ತತ್ವದಂತೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹೈದ್ರಾಬಾದ್‌ ನಲ್ಲಿ ಮಾರ್ಚ್‌ 4 ರಿಂದ 6 ರ ವರೆಗೆ 50 ನೇ ಡೈರಿ ಇಂಡಸ್ಟ್ರಿ ಸಮ್ಮೇಳನ:  ತೆಲಂಗಾಣ ಮುಖ್ಯಮಂತ್ರಿ ರೇವಂತೆ ರೆಡ್ಡಿ ಅವರಿಗೆ ಆಹ್ವಾನ

ಬೆಂಗಳೂರು : ಹೈದ್ರಾಬಾದ್ ನ ಹೈಟೆಕ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಮಾರ್ಚ್ 4 ರಿಂದ 6 ರ ವರೆಗೆ 50 ನೇ ಡೈರಿ ಇಂಡಸ್ಟ್ರಿ ಸಮ್ಮೇಳನ ನಡೆಯಲಿದ್ದು, ಡೈರಿ ವಲಯದಲ್ಲಿ ಇದು ಐತಿಹಾಸಿಕ ಸಮಾರಂಭವಾಗಿದೆ. ಈ ಮಹತ್ವದ ಸಮ್ಮೇಳನ ಉದ್ಘಾಟಿಸುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವಿಧ್ಯುಕ್ತವಾಗಿ ಆಹ್ವಾನ ನೀಡಲಾಗಿದೆ.

ನಾಳೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಜನವರಿ 29) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸೂಚಿಸಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದನ್ನು ಖಂಡಿಸಲಾಗುವುದು. ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ …

ನಾಳೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ Read More »

ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಅನೇಕ ಭಾಷೆಗಳನ್ನು ಮಾತನಾಡುವ ಜನ ಹಾಗೂ ವಿವಿಧ ಸಾಂಸ್ಕøತಿಕ ಹಿನ್ನಲೆಯನ್ನು ಹೊಂದಿರುವುದು ವೈಶಿಷ್ಟಮಯವಾಗಿದೆ ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು.

ಭಾರತ ಚುನಾವಣಾ ಆಯೋಗದಿಂದ ಕರ್ನಾಟಕ ರಾಜ್ಯಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ನಮ್ಮ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.

Translate »
Scroll to Top