LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Education News

3.30 ಲಕ್ಷ ವಿದ್ಯಾರ್ಥಿಗಳು ಯುಜಿಸಿಇಟಿ ಪರೀಕ್ಷೆಗೆ ಅರ್ಹತೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇದೇ 16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ಭಾನುವಾರ ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು, ಕೆಇಎ ವೆಬ್ ಸೈಟ್ ನಲ್ಲಿ ಯುಜಿಸಿಇಟಿ-25 ಪ್ರವೇಶ ಪತ್ರ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಲಾಗಿನ್ ಐಡಿ ಸಂಖ್ಯೆ, ಹೆಸರು ದಾಖಲಿಸುವುದರ ಮೂಲಕ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಓಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಈ ಸಲದ ಪ್ರವೇಶ ಪತ್ರದಲ್ಲಿ ಪ್ರಮುಖವಾಗಿ ಕ್ಯೂಆರ್ ಕೋಡ್ ಇದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಮಾದರಿ ಓಎಂಆರ್ ಶೀಟ್ ಹಾಗೂ ಮಾರ್ಗಸೂಚಿ ಪಟ್ಟಿ- ಹೀಗೆ ಒಟ್ಟು ಎರಡು ಪುಟಗಳಿದ್ದು ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು. ಮಾದರಿ ಓಎಂಆರ್ ಶೀಟ್ ಅನ್ನೂ ವಿದ್ಯಾರ್ಥಿಗಳು ಅಭ್ಯಾಸಕ್ಕೆ ಬಳಸಬೇಕು. ಆ ಮೂಲಕ ಪರೀಕ್ಷೆ ಸಂದರ್ಭದಲ್ಲಿ ಆಗುವ ತಪ್ಪುಗಳನ್ನು ತಪ್ಪಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಎಂಜಿನಿಯರಿಂಗ್ ಸೇರಿದಂತೆ ಕೆಇಎ ನಡೆಸುವ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯನ್ನು‌ 3,30,875 ಅಭ್ಯರ್ಥಿಗಳು ಈ ಬಾರಿ ತೆಗೆದುಕೊಂಡಿದ್ದಾರೆ. ಇಷ್ಟೂ ಮಂದಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಏ.15ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆ ಗೂ ಇದೇ ಪ್ರವೇಶ ಪತ್ರ ಅನ್ವಯ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ