LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಆಗ್ರಹಿಸಿ 31 ಶಾಸಕರು ಹೈಕಮಾಂಡ್ ಗೆ ಪತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಮಾಡಿ ಎಂದು ಆಗ್ರಹಿಸಿ 31 ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ. ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರು ಈ ಮನವಿ ಪತ್ರವನ್ನು ಬರೆದಿದ್ದು, ಆದಷ್ಟು ಬೇಗ ಸಂಪುಟ ಪುನಾರಚನೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಈ ಪತ್ರವನ್ನು ಬರೆಯಲಾಗಿದೆ. ಪತ್ರದಲ್ಲಿ ದಿನಾಂಕ ಉಲ್ಲೇಖ ಮಾಡಿಲ್ಲ. ಆದರೆ 31 ಶಾಸಕರ ಸಹಿ ಇದೆ. ಈ ಪತ್ರ ಇದೀಗ ವೈರಲ್ ಆಗುತ್ತಿದೆ.
ಕಾಂಗ್ರೆಸ್ ನಲ್ಲಿ 31 ಶಾಸಕರು ಹೊಸದಾಗಿ ಗೆದ್ದಿದ್ದೇವೆ. ಬೇರೆ ರಾಜ್ಯಗಳಲ್ಲಿ ಮೊದಲ ಬಾರಿಗೆ ಗೆದ್ದವರು ಸಿಎಂ ಆಗಿದ್ದಾರೆ. ಮೊದಲ ಬಾರಿ ಗೆದ್ದ ಶಾಸಕರಿಗೂ ಸಚಿವ ಸ್ಥಾನ ನೀಡಿ ಅವಕಾಶ ಕೊಡಬೇಕು ಎಂದು ಮನವಿ ಮಾಡಲಾಗಿದೆ.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ ಆದವರಿಗೆ ಸಂಪುಟದಲ್ಲಿ ಅವಕಾಶ ನೀಡುವುದು ಅಗತ್ಯವಾಗಿದೆ. ಇದರಿಂದ ಯುವ ಮುಖಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಹೀಗಾಗಿ ಈ ಬಾರಿ ಸಂಪುಟ ಪುನಾರಚನೆ ಆದಲ್ಲಿ ಕನಿಷ್ಠ ಪಕ್ಷ ಐದು ಮಂದಿಗೆ ಅವಕಾಶ ನೀಡಬೇಕು. ನಾವು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧರಾಗಿದ್ದೇವೆ. 2028 ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತಕ್ಕೆ ಬರಬೇಕಾಗಿದೆ. ಹಾಗಾಗಿ ಸಂಪುಟದಲ್ಲಿ ಯುವ ಮುಖಗಳಿಗೆ ಅವಕಾಶ ನೀಡಬೇಕು ಎಂದು ಉಲ್ಲೇಖ ಮಾಡಲಾಗಿದೆ.
ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಕೆ ಎನ್ ರಾಜಣ್ಣ ದೆಹಲಿಗೆ ತೆರಳಿದ್ದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಈ ನಡುವೆ ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರಬರೆದಿದ್ದಾರೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ