LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ನಟಿ ಬಿ. ಸರೋಜಾದೇವಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜು.14) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.

ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್​ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು.

ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’, ಹಿಂದಿಯಲ್ಲಿ ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ