LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
International News

ಇರಾನ್ ಪರಮಾಣುಗಳ ಮೇಲೆ ಇಸ್ರೇಲ್ ನಿಂದ ವೈಮಾನಿಕ ದಾಳಿ !

ಇರಾನ್ ಪರಮಾಣುಗಳ ಮೇಲೆ ಇಸ್ರೇಲ್ ನಿಂದ ವೈಮಾನಿಕ ದಾಳಿ !

ಟೆಹ್ರಾನ್: ಇಸ್ರೇಲ್ ವಾಯುಪಡೆಯು ಇರಾನ್‌ ನಲ್ಲಿ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗೆ ಈ ದಾಳಿಯು ಮತ್ತಷ್ಟು ತೀವ್ರತೆಹೆಚ್ಚಿಸಿದೆ. ಶುಕ್ರವಾರ ಮುಂಜಾನೆ ಟೆಹ್ರಾನ್‌ ನ ಈಶಾನ್ಯದಲ್ಲಿ ಸ್ಫೋಟಗಳು ವರದಿಯಾಗಿವೆ ಎಂದು ಇರಾನ್‌ ನ ಸರ್ಕಾರಿ ಸ್ವಾಮ್ಯದ ನೂರ್ ನ್ಯೂಸ್ ದೃಢಪಡಿಸಿದೆ. "ಇಸ್ರೇಲ್ ಇರಾನ್‌ ನಲ್ಲಿದಾಳಿಗಳನ್ನು ನಡೆಸಿದೆ" ಎಂದು ಇಬ್ಬರು ಅಮೆರಿಕದ ಅಧಿಕಾರಿಗಳು ರಾಯಿಟರ್ಸ್‌ಗೆ ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಅಮೆರಿಕ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಇಸ್ರೇಲ್‌ ನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಶೀಘ್ರದಲ್ಲೇ ಇಸ್ರೇಲ್ ಮತ್ತು ಅದರ ನಾಗರಿಕರನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ಬರುವ ಸಾಧ್ಯತೆ ಇದೆ ಎಂದು ಕ್ಯಾಟ್ಜ್ ಎಚ್ಚರಿಸಿದ್ದಾರೆ. "ಇರಾನ್ ವಿರುದ್ಧ ಇಸ್ರೇಲ್ ರಾಷ್ಟ್ರವು ನಡೆಸಿದ ಪೂರ್ವಭಾವಿ ದಾಳಿಯ ನಂತರ, ಇಸ್ರೇಲ್ ರಾಷ್ಟ್ರ ಮತ್ತು ಅದರ ನಾಗರಿಕರ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಿರೀಕ್ಷಿಸಲಾಗಿದೆ" ಎಂದು ಕ್ಯಾಟ್ಜ್ ಹೇಳಿದ್ದಾರೆ.

ಇಸ್ರೇಲ್‌ ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ, ಇರಾನ್ ವಿರುದ್ಧದ ವೈಮಾನಿಕ ದಾಳಿ ಮುಂದುವರಿದಿರುವ ನಡುವೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಭದ್ರತಾ ಸಚಿವ ಸಂಪುಟದ ತುರ್ತು ಸಭೆಯನ್ನು ಕರೆದಿದ್ದಾರೆ.

ಇಸ್ರೇಲ್‌ನೊಂದಿಗೆ ಹೆಚ್ಚಿದ ಉದ್ವಿಗ್ನತೆಯ ನಂತರ, ದೇಶದ ವಾಯು ರಕ್ಷಣಾ ವ್ಯವಸ್ಥೆಯು ಸಂಪೂರ್ಣ ಎಚ್ಚರಿಕೆಯಿಂದಿದೆ ಎಂದು ಇರಾನ್‌ ನ ಅಧಿಕೃತ ದೂರದರ್ಶನವು ವರದಿ ಮಾಡಿದೆ.

ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಕ್ಯಾಬಿನೆಟ್ ಮಟ್ಟದ ಸಭೆಯನ್ನು ಕರೆಯಲಿದ್ದಾರೆ ಎಂದು ಸಿಏನೆನ್ ವರದಿ ಮಾಡಿದೆ.

ಇರಾನಿನಲ್ಲಿ ಹೆಚ್ಚುತ್ತಿರುವ ಪರಮಾಣು ಪುಷ್ಟೀಕರಣ ಕಾರ್ಯಕ್ರಮದ ಕುರಿತು ರವಿವಾರ ಅಮೆರಿಕ ಮತ್ತು ಇರಾನಿನ ಅಧಿಕಾರಿಗಳು ಒಮಾನ್ ನಲ್ಲಿ ಆರನೇ ಸುತ್ತಿನ ಮಾತುಕತೆ ನಡೆಸಲು ನಿರ್ಧರಿಸಿದ್ದ ಮಧ್ಯೆ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯು ಗಂಭೀರ ತುರ್ತು ಪರಿಸ್ಥಿತಿಯನ್ನು ಹುಟ್ಟು ಹಾಕಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ