LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಅಂಬೇಡ್ಕರ್ ದೇಶದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ ಟಟ ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು :
ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.

ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ:
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ