LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಇದೇ ಏಪ್ರಿಲ್ 15 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ‌ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.
ರಾಜ್ಯಾದ್ಯಂತ ಎಲ್ಲಾ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದ್ದು, ಗೂಡ್ಸ್ ವಾಹನಗಳು, ಏರ್‌ಪೋರ್ಟ್‌ ಟ್ಯಾಕ್ಸಿಗಳೂ ಸಹ ಸಂಪೂರ್ಣ ಬಂದ್‌ ಆಗಲಿದೆ ಎಂದು ಹೇಳಿದರು.
ಲಾರಿ ಮಾಲೀಕರ ಸಂಘದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೇಲ್ ಬೆಲೆ 7 ತಿಂಗಳಲ್ಲಿ 5 ರೂ ಏರಿಕೆಯಾಗಿದೆ. ಇದು ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಫಿಟ್ನೆಸ್ ಫೀಸ್, ಬಾರ್ಡರ್ ಚೆಕ್ ಪೋಸ್ಟ್, ಡಿಸೇಲ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. 14ನೇ ತಾರೀಖು ಅಂಬೇಡ್ಕರ್ ಜಯಂತಿ ರಾತ್ರಿಯಿಂದಲೇ ಹೋರಾಟ ಶುರು ಮಾಡಲಿದ್ದೇವೆ. ಬೇಡಿಕೆ ಈಡೇರುವವರೆಗೆ ಕರ್ನಾಟಕದ ಒಳಗೆ ಯಾರೂ ಬರಲ್ಲ. ಇದಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲಕೊಟ್ಟಿದ್ದಾರೆ ಎಂದರು.
ಏರ್ಪೋಟ್ ಟ್ಯಾಕ್ಸಿ, ಜಲ್ಲಿ ಮರಳು, ಸೇರಿದಂತೆ ಗೂಡ್ಸ್ ವಾಹನಗಳು ಬಂದ್ ಆಗಲಿವೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳು ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದರು.

ಏಪ್ರಿಲ್‌ 14ರ ವರೆಗೆ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಮಣಿಯದಿದ್ದರೆ, 14ರ ರಾತ್ರಿಯಿಂದಲೇ ಹೋರಾಟ ಆರಂಭಿಸುತ್ತೇವೆ ಹೋರಾಟ ಆರಂಭವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಏಪ್ರಿಲ್‌ 15ರಿಂದ ಏರ್ ಪೋರ್ಟ್ ಟ್ಯಾಕ್ಸಿ, ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ 6 ಲಕ್ಷ ಲಾರಿಗಳ ಸಂಚಾರ ಬಂದ್‌ ಆಗಲಿದೆ. ಜೊತೆಗೆ ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿಗಳನ್ನೂ ಬಂದ್‌ ಮಾಡಲಾಗುತ್ತದೆ. ಇದಕ್ಕೆ ಚಾಲಕರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳ 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಲಿವೆ ಎಂದು ಅವರು ವಿವರಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ