LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆ ಬಂಧನ

ಬೆಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳ ಜೊತೆ ನಗರ ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲಾ ಮೂಲದ ಅನರುಲ್ ಶೇಖ್ (25) ಬಂಧಿತ ಆರೋಪಿಯಾಗಿದ್ದಾನೆ.
ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್‍ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‍ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್‍ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.
ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೆÇಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಗಾಂಜಾ ವಶ, ಆರೋಪಿ ಸೆರೆ:
ಮಂಗಳೂರು ಹಾಗೂ ಕೇರಳಕ್ಕೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಕೇರಳದ ಕೋಝಿಕ್ಕೋಡ್‍ನ ಶಮೀರ್ ಪಿ.ಕೆ (42) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ಬಳಿ ಇದ್ದ 73 ಲಕ್ಷ ಮೌಲ್ಯದ ಹೈಡ್ರೋವೀಡ್ ಗಾಂಜಾವನ್ನು ಸಿಸಿಬಿ ಪೆÇಲೀಸರು ವಶಪಡಿಸಿಕೊಂಡಿದ್ದಾರೆ.
ವಿದೇಶದಿಂದ ಗೋವಾಕ್ಕೆ ಬಂದ ಗಾಂಜಾವನ್ನು ಆರೋಪಿ ಶಮೀರ್ ಪಿ.ಕೆ ಕಾರಿನಲ್ಲಿ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಕಾರ್ಯಪ್ರವೃತ್ತರಾಗಿ ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿಯ ಬಪ್ಪನಾಡು ಬಳಿ ಆರೋಪಿ ಶಮೀರ್ ಪಿ.ಕೆಯನ್ನು ತಡೆದಿದ್ದಾರೆ.
ಮಾಲು ಸಮೇತ ಸಿಕ್ಕ ಶಮೀರ್ ಪಿ.ಕೆಯನ್ನು ಬಂಧಿಸಿದ್ದಾರೆ. 738 ಗ್ರಾಂ ಹೈಡ್ರೋವೀಡ್ ಗಾಂಜಾ, ಕಾರು, ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ