LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

ಕುರುಗೋಡಿನಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ


ಬಳ್ಳಾರಿ:ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ ಮತ್ತು ಸಮತೋಲಿತ ಆಹಾರ ಸೇವನೆಯಿಂದ ಮಾತ್ರ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಸಾಧ್ಯ ಎಂದು ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದ ಫಿಜಿಷಿಯನ್ ಡಾ. ಯೋಗಾನಂದ ರೆಡ್ಡಿ ಅವರು ತಿಳಿಸಿದರು.
ಕುರುಗೋಡು ಪಟ್ಟಣದಲ್ಲಿ ಮಂಗಳವಾರ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ಕುರುಗೋಡು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಓರ್ವಾಯಿ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಿಎಂ ಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಹೃದಯ ದಿನಾಚರಣೆ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ತಜ್ಞೆ ಡಾ. ರೋಹಿಣಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲೂ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಧೂಮಪಾನ, ತಂಬಾಕು ಹಾಗೂ ಇತರ ದುಶ್ಚಟಗಳಿಂದ ದೂರವಿರಬೇಕು. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಕರೆ ನೀಡಿದರು.
ಜಾಗೃತಿ ಜಾಥಾ:ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಿಂದ ಆರಂಭವಾದ ಜಾಥಾವು ಮುಷ್ಟಘಟ್ಟೆ ರಸ್ತೆ, ಹಳೇ ಮೈಸೂರು ಬ್ಯಾಂಕ್ ರಸ್ತೆ, ಗೆಣಿಕೆಹಾಳ್ ರಸ್ತೆ, ನಾಡಗೌಡರ ವೃತ್ತ, ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಮಾರ್ಗವಾಗಿ ಸಂಚರಿಸಿ ಶಾಲಾ ಆವರಣ ತಲುಪಿತು. ಮೆರವಣಿಗೆಯುದ್ದಕ್ಕೂ ವಿದ್ಯಾರ್ಥಿಗಳು ಮತ್ತು ಆರೋಗ್ಯ ಸಿಬ್ಬಂದಿ ಹೃದಯದ ಆರೋಗ್ಯ ಕಾಪಾಡುವ ಕುರಿತು ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಸೀನಿಯರ್ ಫಾರ್ಮಸಿಸ್ಟ್ ಶೇಷಗಿರಿ ದಾನಿ, ಪ್ರಾಥಮಿಕ ಸುರಕ್ಷಣಾಧಿಕಾರಿಗಳಾದ (ಎಲ್.ಎಚ್.ವಿ) ನೀಲಾವತಿ, ಡಿ. ಸುನೀತಾ, ಗಿರಿಜಾ, ಜಯಶ್ರೀ, ಆಪ್ತ ಸಮಾಲೋಚಕರಾದ ಕರಿಬಸವ ಎನ್., ವನಜಾಕ್ಷಿ ಎಚ್., ನೇತ್ರಾವತಿ, ಮಹಬೂಬ್ ಭಾಷಾ, ಲ್ಯಾಬ್ ಟೆಕ್ನಿಷಿಯನ್ ಅಬ್ದುಲ್ ಸುಭಾನ್ ಕೆ., ಡಿ.ಇ.ಓ. ಶೇಖರ್ ಹೆಚ್., ಡಯಾಲಿಸಿಸ್ ಘಟಕದ ಸಿಬ್ಬಂದಿ ಅಶ್ವಿನಿ, ಅರುಣ್ ಕುಮಾರ್, ಜಾವಿದ್ ಭಾಗವಹಿಸಿದ್ದರು.
ಜೊತೆಗೆ ಪಿಎಂ ಶ್ರೀ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ತುಳಸಿಪವರ್, ಸಹಶಿಕ್ಷಕರಾದ ಗುರುಮೂರ್ತಿ, ಷಷಾವಲಿ, ಲೋಕೇಶ್, ಮೌನೇಶ್ ಆಚಾರ್, ರಾಜು, ಕಾಸಿಂವಲಿ, ಪ್ರಭಾಕರ್ ರೆಡ್ಡಿ, ಜಡೆಪ್ಪ, ಹುಲ್ತೆಪ್ಪ, ಪಂಪಾಪತಿ, ಚಂದಾಬಸವ, ಸಹ ಶಿಕ್ಷಕಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಕಾ ್ಯಬಿನೆಟ್‍ನಲ್ಲಿ ಹಾಲಿನ ದರ ತೀರ್ಮಾನ!ಬರ ಪರಿಹಾರ ನೀಡಿಲ್ಲ, ನಾವಿಟ್ಟ ಬೇಡಿಕೆ ಈಡೇರಿಸಿಲ್ಲ, ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ: ಪ್ರತಿಪಕ್ಷ ನಾಯಕ ಆರ್‌.ಅಶೋಕಸದ್ಯದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ ನಿರ್ಧಾರಕುರುಗೋಡಿನಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಹರಿಹಾಯ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಶಾಸಕ ರಾಘವೇಂದ್ರ ಹಿಟ್ನಾಳ್ 10 ಸಾವಿರ ಕೋಟಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ : ಗಣೇಶ್ ಹೊರತಟ್ನಾಳ್ ಸವಾಲ್8 ವರ್ಷದ ಬಾಲಕ: ಪೋಷಕರ ಪತ್ತೆಗೆ ಮನವಿ"ಪ್ರತಿ ಹೃದಯ ಬಡಿತವೂ ಮಹತ್ವದ್ದು” ಎಂಬ ಧ್ಯೇಯವಾಕ್ಯದೊಂದಿಗೆ ಇ.ಎಸ್.ಐ.ಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆಬಸವನ ಬಾಗೇವಾಡಿಯಲ್ಲಿ ಭೂಕಂಪನ