LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಹೊಸ ಸ್ಥಳದಲ್ಲಿ ಬಳ್ಳಾರಿ ಏರ್ ಪೋರ್ಟ್

ಬೆಂಗಳೂರು : ರಾಜ್ಯದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತೊಂದು ಹೊಸ ಏರ್‍ಪೆÇೀರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಶೀಘ್ರವೇ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ಮೂರು ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಬಳ್ಳಾರಿ ಜಿಲ್ಲೆಯಲ್ಲಿ ನಿರ್ಮಿಸಲಾಗುವುದು.
ಈ ಸಂಬಂಧ ಶೀಘ್ರವೇ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಮುಂ ದಿನ ಹೆಜ್ಜೆ ಇಡಲಾಗುವುದು ಎಂದು ಕೈಗಾರಿಕೆ ಹಾಗೂ ಮೂಲ ಸೌಕರ್ಯಾಭಿವೃದ್ಧಿ ಸಚಿವ ಎಂಬಿ ಪಾಟೀಲ ಶುಕ್ರವಾರ ಮಾಹಿತಿ ನೀಡಿದರು.
ಬಜೆಟ್ ಅಧಿವೇಶನದಲ್ಲಿ ಗಂಗಾವತಿಯ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶೂನ್ಯ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಎಂಬಿ ಪಾಟೀಲರು ವಿವರವಾಗಿ ಉತ್ತರಿಸಿದರು. ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು, ಸಿರಗುಪ್ಪ ಮುಂತಾದ ಭಾಗಗಳಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ಬರಬೇಕೆಂಬುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. ಬಳ್ಳಾರಿ ಸಮೀಪ 19 ಕಿ.ಮೀ. ದೂರದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದು ಕಾರ್ಯಸಾಧು ಎನಿಸಿದರೆ ಎಲ್ಲ ಜನಪ್ರತಿನಿಧಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡು ಪ್ರಕಟಿಸಲಾಗುವುದು. ಬಳ್ಳಾರಿ ವಿಮಾನ ನಿಲ್ದಾಣದಿಂದ ಆ ಜಿಲ್ಲೆಯ ಜತೆಗೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೂ ಸಂಚಾರಕ್ಕೂ ಪ್ರಯೋಜನ ಆಗಬೇಕು. ಬಳ್ಳಾರಿ ಏರ್‍ಪೆÇೀರ್ಟ್ ನಿಂದ ನೆರೆಯ ಆಂಧ್ರ ಪ್ರದೇಶಕ್ಕೂ ಲಾಭವಾಗಲಿದೆ.
ಈ ಯೋಜನೆಯ ಅನುಷ್ಠಾನಕ್ಕಾಗಿ ಶೀಘ್ರವೇ ಸದರಿ ಮೂರು ಜಿಲ್ಲೆಗಳ ಸಂಬಂಧ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆಯಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಯೋಜನೆಯ ಸಾಧಕ ಬಾಧಕಗಳನ್ನು ಸಮಾಲೋಚಿಸುತ್ತೇವೆ ಎಂದರು.
ಬಳ್ಳಾರಿ ಜಿಲ್ಲೆಯ ಬಹುದಿನಗಳ ಕನಸಾದ ವಿಮಾನ ನಿಲ್ದಾಣ ಯೋಜನೆಗೆ ಹೊಸ ಚಾಲನೆ ಸಿಕ್ಕಿದೆ. ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಅನುಕೂಲವಾಗುವಂತೆ, ಹಂಪಿಯಂತಹ ಪ್ರವಾಸಿ ತಾಣಗಳಿಗೆ ಹತ್ತಿರವಿರುವ ಹೊಸ ಆಯಕಟ್ಟಿನ ಸ್ಥಳವನ್ನು ಸರ್ಕಾರ ಗುರುತಿಸಿದೆ.

ಮೂರು ಜಿಲ್ಲೆಗಳ ಜನರಿಗೆ ಅನುಕೂಲ
ಬಳ್ಳಾರಿ ವಿಜಯನಗರ ಕೊಪ್ಪಳ 3 ಜಿಲ್ಲೆಗಳ ಈ ಭಾಗಗಳಿಂದ ಏರ್‍ಪೆÇೀರ್ಟ್ ದೂರವೆಷ್ಟು? ಈಗ ಹೊಸದಾಗಿ ಗುರುತಿಸಿರುವ ಸ್ಥಳದಿಂದ ಹೊಸಪೇಟೆಗೆ 33 ಕಿ.ಮೀ., ಹಂಪೆಗೆ 26 ಕಿ.ಮೀ, ಸಂಡೂರಿಗೆ 33 ಕಿ.ಮೀ, ಕೊಪ್ಪಳಕ್ಕೆ 75 ಕಿ.ಮೀ, ಕುರುಗೋಡಿಗೆ 14 ಕಿ.ಮೀ, ತೋರಣಗಲ್ಲಿಗೆ 13 ಕಿ.ಮೀ ಮತ್ತು ಸಿರಗುಪ್ಪಕ್ಕೆ 43 ಕಿ.ಮೀ ಆಗಲಿದೆ. ಸದರಿ ಉದ್ದೇಶಿತ ಜಾಗವು ವಿಮಾನ ನಿಲ್ದಾಣಕ್ಕೆ ಎಷ್ಟರ ಮಟ್ಟಿಗೆ ಸೂಕ್ತ ಎನ್ನುವುದನ್ನು ಮುಂದೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ಧರಿಸಲಿದೆ ಎಂದು ಸಚಿವ ಎಂಬಿ ಪಾಟೀಲ ವಿವರಿಸಿದರು.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ