LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಕರ್ನಾಟಕಕ್ಕೆ ಅಪಚಾರ ಎಸೆಗಿದ್ದಾರೆ ಸಿಎಂ ಸಿದ್ದರಾಮಯ್ಯ: ವಿಜಯೇಂದ್ರ

ಮೈಸೂರು: ಇತ್ತೀಚೆಗೆ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿರುವುದು ರಾಜ್ಯಕ್ಕೆ ಹಾಗೂ ನಾಡಿನ ಸಮಸ್ತ ಕನ್ನಡಿಗರಿಗೆ ಅಪಮಾನ ಎಸಗಿದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.
ಇಲ್ಲಿನ ಕಲಾಮಂದಿರದಲ್ಲಿ ಭಾನುವಾರ ನಡೆದ ಬಸವ ಜಯಂತಿ ಆಚರಣೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೂಡಾ ಭಾಗವಹಿಸಿದ್ದರೂ ಇಂತಹ ಮಹತ್ವದ ಸಭೆಗೆ ಗೈರು ಹಾಜರಾಗುವ ಮೂಲಕ ಮುಖ್ಯಮಂತ್ರಿಗಳು ರಾಜ್ಯವನ್ನು ನಿರಾಸೆಗೊಳಿಸಿದ್ದಾರೆ ಎಂದು ಆರೋಪಿಸಿದರು.
ನಮ್ಮ ಮುಖ್ಯಮಂತ್ರಿ ನೀತಿ ಆಯೋಗದ ಸಭೆಯನ್ನು ಏಕೆ ಬಹಿಷ್ಕರಿಸಿದರು? ಎಂದು ಪ್ರಶ್ನಿಸಿದ ವಿಜಯೇಂದ್ರ, ಕೇಂದ್ರ ಸರ್ಕಾರದ ವಿರುದ್ಧ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ಸಮಯ ಇರುವ ಮುಖ್ಯಮಂತ್ರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆದ ಸಭೆಗೆ ಗೈರಾಗುತ್ತಾರೆ. ಇದು ಸ್ಪಷ್ಟವಾಗಿ ರಾಜಕೀಯವಾಗಿದೆ ಎಂದರು.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿAದಲೂ ನಿರಂತರವಾಗಿ ಕೇಂದ್ರದ ವಿರುದ್ಧ ಸಂಘರ್ಷದ ನಿಲುವು ತಳೆಯುತ್ತಿದ್ದಾರೆ. ಇಂತಹ ಕ್ರಮಗಳು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೇಯದಲ್ಲಾ ಎಂದು ಎಚ್ಚರಿಸಿದರು.

ಅಭಿವೃದ್ಧಿಶೂನ್ಯ ಆಡಳಿತ:
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಶಾಸಕರಿಗೆ ಸಾಕಷ್ಟು ಅಭಿವೃದ್ಧಿ ಹಣವನ್ನು ಮಂಜೂರು ಮಾಡುವಲ್ಲಿ ವಿಫಲವಾಗುತ್ತಿದ್ದು, ಅವರ ಪಕ್ಷದಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಕಿಡಿಕಾರಿದರು.ಅನುದಾನ ಸಿಗದ ಕಾರಣ ಶಾಸಕ ರಾಜು ಕಾಗೆ ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ವ್ಯಕ್ತಪಡಿಸಿದ್ದು, ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ. ಕುಂಠಿತಗೊAಡಿರುವ ಅಭಿವೃದ್ಧಿ ಕಾಮಗಾರಿಗಳಿಂದ ಶಾಸಕರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು

ಜನೌಷಧಿ ಕೇಂದ್ರಗಳ ಬಾಗಿಲು ಮುಚ್ಚುತ್ತಿದೆ ರಾಜ್ಯ ಸರ್ಕಾರ
ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು (ಪಿಎಂಬಿಜೆಕೆ) ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಜಯೇಂದ್ರ ಖಂಡಿಸಿದರು. ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಗಳನ್ನು ನೀಡುವ ಉದ್ದೇಶದಿಂದ ರೋಗಿಗಳಿಗೆ ಬೆಲೆ ಬಾಳುವ ಔಷಧಗಳನ್ನು ಹೊರಗಿನಿಂದ ಖರೀದಿಸುವಂತೆ ಹೇಳಲಾಗುತ್ತಿದೆ. ಸರ್ಕಾರ ವೈದ್ಯಕೀಯ ಮಾಫಿಯಾ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕ್ರಮವು ಬಡ ರೋಗಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಮುಖ್ಯಮಂತ್ರಿಗಳು ಸ್ವತಃ ಆಸ್ಪತ್ರೆಗಳಿಗೆ ಭೇಟಿ ನೀಡಿ ಔಷಧಗಳ ಕೊರತೆಯನ್ನು ನೋಡಬೇಕು ಎಂದು ಒತ್ತಾಯಿಸಿದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ