LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ

ಬೆಳಗಾವಿ : ಕರ್ನಾಟಕವನ್ನು ಬೆಸೆಯುವ, ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್-ಚಾಮರಾಜನಗರ ಹೆದ್ದಾರಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವು ಕಲ್ಯಾಣ-ಕರ್ನಾಟಕ ಪ್ರದೇಶಗಳಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ವಿಧಾನಪರಿಷತ್ತಿಗಿಂದು ತಿಳಿಸಿದರು.
ಶಶಿಲ್ ಜಿ. ನಮೋಶಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಲ್ಯಾಣ ಪಥ ಯೋಜನೆಯನ್ನು ಕೆ.ಆರ್.ಆರ್.ಡಿ.ಎ ದಿಂದ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಕಲ್ಯಾಣ ಪಥ ಯೋಜನೆಯಡಿ ಒಟ್ಟು 1124.70 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು ರೂ. 1000 ಕೋಟಿಗಳ ಅನುದಾನದಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆ ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿದ್ದು, 2025-26ನೇ ಸಾಲಿನಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ. ಒಟ್ಟು 286 ಕಾಮಗಾರಿಗಳನ್ನು ಕೈಗೊಂಡಿದ್ದು, 281 ಕಾಮಗಾರಿಗಳು ಪ್ರಗತಿಯಲ್ಲಿವೆ. 05 ಕಾಮಗಾರಿಗಳು ಟೆಂಡರ್ ಪ್ರಕ್ರಿಯಯಲ್ಲಿದೆ. ಈಗಾಗಲೇ 75 ಕಿ.ಮೀ ಉದ್ದವನ್ನು ಪೂರ್ಣಗೊಳಿಸಿದ್ದು, ರೂ.150 ಕೋಟಿ ವೆಚ್ಚ ಮಾಡಲಾಗಿದೆ ಎಂದು ಕೆಆರ್‍ಆರ್‍ಡಿಎ ವರದಿ ನೀಡಿದೆ ಎಂದು ಸಚಿವರು ತಿಳಿಸಿದರು.ಗ್ರಾಮೀಣ ರಸ್ತೆ ಸಂಪರ್ಕವು ಗ್ರಾಮೀಣ ಕ್ಷೇತ್ರದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಹೆಚ್ಚಿಸುವಲ್ಲಿ ಪ್ರಮುಖ ಅಂಶವಾಗಿರುವುದರಿಂದ ಗ್ರಾಮೀಣ ರಸ್ತೆಗಳನ್ನು ಸರ್ವಋತು ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಅಗತ್ಯತೆ ಇರುತ್ತದೆ. ಗ್ರಾಮೀಣ ರಸ್ತೆಗಳನ್ನು ಸರ್ವಋತು ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವುದರಿಂದ ಗ್ರಾಮೀಣ ಭಾಗದ ಜನರಿಗೆ ಜಿಲ್ಲಾ, ತಾಲ್ಲೂಕು ಕೇಂದ್ರಕ್ಕೆ ಹಾಗೂ ಮಾರುಕಟ್ಟೆ, ಆಸ್ಪತ್ರೆ, ಶೈಕ್ಷಣಿಕ ಕೇಂದ್ರಗಳಿಗೆ ಸಂಪರ್ಕ ದೊರಕಲಿದ್ದು ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಪೂರಕವಾಗುವುದು. ಈ ಹಿನ್ನೆಲೆಯಲ್ಲಿ ಕಲ್ಯಾಣ ಪಥ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ