LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಶಾಸಕರಿಗೆ ಡಿಸಿಎಂ ಗಾಳ?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಚ ಚಟುವಟಿಕೆಗಳು ಚುರುಕುಗೊಂಡಿದೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದೆಹಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ ಆಪ್ತ ಶಾಸಕರು, ಸಚಿವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.
ಈ ಮಧ್ಯೆ ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರೊಂದಿಗೆ ಚರ್ಚೆ ನಡೆಸಲು ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದರು. ಇಬ್ಬರು ಕಾಂಗ್ರೆಸ್ ಶಾಸಕರು ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ.
ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ವ್ಯಾಪಕವಾಗಿತ್ತು. ಆದರೆ ಈಗ ನವೆಂಬರ್ ಕ್ರಾಂತಿಗೆ ಸಂಬಂಧಿಸಿದ ಚಟುವಟಿಕೆಗಳು ಆರಂಭವಾಗಿದೆ. ಒಂದು ವೇಳೆ ಅಧಿಕಾರ ಹಂಚಿಕೆ ವಿಚಾರ ಬಂದಲ್ಲಿ ಶಾಸಕರ ಬೆಂಬಲದ ವಿಚಾರ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಸಕ್ರಿಯರಾಗಿರುವ ಡಿಕೆ ಶಿವಕುಮಾರ್, ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!