LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಡಾಕ್ಟರ್ ಕಿಡ್ನಾಪ್ ಪ್ರಕರಣ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಬಳ್ಳಾರಿ: ಹಾಡುಹಗಲೇ ಬಳ್ಳಾರಿ ಜಿಲ್ಲಾಸ್ಪತ್ರೆ ವೈದ್ಯನ ಕಿಡ್ನಾಪ್ ಮಾಡಿದ್ದ ಆರೋಪಿಗಳ ಬಂಧಿಸುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇಲೆ ಆರೋಪಿಗಳು ಇದ್ದ ಸ್ಥಳಕ್ಕೆ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದ ಆರೋಪಿ ಮೇಲೆ ಪೊಲೀಸ್‌ರು ಗುಂಡು ಹಾರಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್, ರಾಕೇಶ್, ತರುಣ್, ಅರುಣ್, ಭೋಜರಾಜ್, ಸಾಯಿಕುಮಾರ್ ಸೇರಿದಂತೆ ಒಟ್ಟು ಏಳು ಜನರ ಬಂಧನವಾಗಿದೆ. ಆರೋಪಿಗಳಲ್ಲಿ ಬಳ್ಳಾರಿಯ ಆರು ಜನ, ಒಬ್ಬ ಆಂಧ್ರ ಮೂಲದವರು ಎಂದು ತಿಳಿದುಬಂದಿದೆ.

ಬಳ್ಳಾರಿ ತಾಲೂಕಿನ ಮೋಕಾ ರಸ್ತೆಯ ಬಳಿ ಆರೋಪಿಗಳು ಇರುವ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಲು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆಗೆ ಮಾಡಲು ಆರೋಪಿಗಳು ಮುಂದಾಗಿದ್ದಾರೆ. ಸಿಪಿಐ ಮಲ್ಲಿಕಾರ್ಜುನ ಸಿಂಧೂರ್ ಆರೋಪಿ ಶ್ರೀಕಾಂತ್‌ಗೆ ಫೈರ್ ಮಾಡಿದ್ದಾರೆ. ಆರೋಪಿ ಶ್ರೀಕಾಂತ್ ಬಲಗಾಲಿಗೆ ಗುಂಡೇಟು ಬಿದ್ದಿದ್ದು, ಬಳ್ಳಾರಿಯ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೇಯೇ ಆರೋಪಿಗಳಿಂದ ಹಲ್ಲೆಗೆ ಒಳಗಾದ ಪೊಲೀಸ್ ಪೇದೆ ಕಾಳಿಂಗ ಅವರಿಗೂ ಕೂಡಾ ಚಿಕಿತ್ಸೆ ನೀಡಲಾಗುತ್ತಿದೆ.

ಜನವರಿ 25 ರಂದು ಡಾಕ್ಟರ್ ಸುನೀಲ್ ಎಂಬುವರು ವಾಕಿಂಗ್ ಮಾಡುತ್ತಿದ್ದಾಗ ಸತ್ಯನಾರಾಯಣಪೇಟೆಯ ಶನೇಶ್ವರಗುಡಿ ಬಳಿ ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅವರ ಬಾಯಿಮುಚ್ಚಿ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಬಳಿಕ, ಡಾ.ಸುನೀಲ್ ಮೊಬೈಲ್‌ನಿಂದಲೇ ಕರೆ ಮಾಡಿ 6 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದೆ ದಿನ ರಾತ್ರಿ 9ಗಂಟೆಗೆ ಕುರುಗೋಡು ಬಳಿಯ ಸೋಮಸಮುದ್ರದ ಹೊಲದಲ್ಲಿ ಬಿಟ್ಟು ಹೋಗಿದ್ದರು.
ಕಿಡ್ನಾಪ್ ಮಾಡಿದ್ದ ದುಷ್ಕರ್ಮಿಗಳ ಸೆರೆ ಹಿಡಿಯಲು ಬಲೆ ಬೀಸಿದ್ದ ಬಳ್ಳಾರಿ ಪೊಲೀಸ್‌ರು ನಾಲ್ಕು ದಿನಗಳ ಬಳಿಕ ಖದೀಮರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ