E-PAPER
17 Nov 2026, 05:25:31 AM|
Gold₹13462/gGold24K ₹13,462/g - 22K ₹12,340/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ಸ್ಥಳೀಯ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಲವು: ಆರ್.ಅಶೋಕ್

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್‌‍ ಮೈತ್ರಿ ಇರಬೇಕೆಂಬುದು ಹಲವರ ಅಭಿಪ್ರಾಯವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಇರಬೇಕು ಎಂಬ ಅಭಿಪ್ರಾಯ ಹಲವರಲ್ಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಒಂದೊಂದು ರೀತಿಯ ರಾಜಕೀಯ ವಾತಾವರಣವಿದೆ. ಹೀಗಾಗಿ ಸಮನ್ವಯ ಸಮಿತಿ ಸಭೆ ನಡೆಸಿ, ಕಾರ್ಯಕರ್ತರ ಅಭಿಪ್ರಾಯಗಳನ್ನೂ ಚರ್ಚಿಸಲಾಗುವುದು. ಅಂತಿಮವಾಗಿ ಕೇಂದ್ರದ ಬಿಜೆಪಿ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ವಿಚಾರಕ್ಕೆ ಸಂಬಂಧಿಸಿದಂತೆ, ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಪಕ್ಷ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ ಎಂದರು.
ಈ ಬಗ್ಗೆ ಜೆಡಿಎಸ್‌‍ ನಾಯಕ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು. ಅಂತಿಮವಾಗಿ ಕೇಂದ್ರದ ನಾಯಕರು ಜೆಡಿಎಸ್‌‍ ಅನ್ನು ಮನವೊಲಿಸಿ ಬಿಜೆಪಿಗೇ ಹಿರಿಯೂರು ಟಿಕೆಟ್‌ ನೀಡುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ಕಾಂಗ್ರೆಸ್‌‍ ಪಕ್ಷ ರಾಜಕೀಯ ಮಾಡುತ್ತಿದ್ದು, ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ. ತಮಿಳುನಾಡು ಸರ್ಕಾರ ಹಾಗೂ ಅಲ್ಲಿನ ಕಾಂಗ್ರೆಸ್‌‍ ನಾಯಕರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್‌‍ ನಾಯಕರು ಮೇಕೆದಾಟು ಯೋಜನೆ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಮೇಕೆದಾಟು ಯೋಜನೆ ಆಗಬೇಕಾದರೆ ಬಿಜೆಪಿಯ ಸರ್ಕಾರವೇ ಬರಬೇಕು. ಕಾಂಗ್ರೆಸ್‌‍ನವರು ಸುಮನೆ ಬೊಗಳೆ ಬಿಡುತ್ತಾ ನಾಟಕ ಆಡುತ್ತಿದ್ದಾರೆ. ವೋಟ್‌ಗಾಗಿ ಹೇಳುವುದೊಂದು, ಮಾಡುವುದೊಂದು ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡು ಕಾಂಗ್ರೆಸ್‌‍ ಅಧ್ಯಕ್ಷರೇ ಮೇಕೆದಾಟು ಯೋಜನೆ ಕಾನೂನುಬಾಹಿರ ಎಂದು ಹೇಳಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್‌‍ ಅಧ್ಯಕ್ಷರು ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಸ್ಪಷ್ಟವಾಗಿ ಮಾತನಾಡಬೇಕು ಎಂದು ಆಗ್ರಹಿಸಿದ ಅವರು, ಎಲ್ಲಿದ್ದೀಯಪ್ಪ ರಾಹುಲ್‌ ಗಾಂಧಿ? ಅಲ್ಲಿ ಅಂಡಮಾನ್‌ಗೆ ಹೋಗಿ ಮರ ತಬ್ಬಿಕೊಳ್ಳುತ್ತೀರಲ್ಲ, ಮೇಕೆದಾಟನ್ನೂ ಒಮೆ ತಬ್ಬಿಕೊಳ್ಳಿ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್‌‍ ಪಕ್ಷ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ರಾಜ್ಯದ ಜನರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರೋಪಿಸಿದ ಅಶೋಕ್‌, ಹಳೇ ಮೈಸೂರು ಭಾಗದ ಜನರು ಇದನ್ನು ಸುಮನೆ ಬಿಡುವುದಿಲ್ಲ. ಕಾಂಗ್ರೆಸ್‌‍ ಸರ್ಕಾರವನ್ನು ಕಿತ್ತು ಬಿಸಾಕುತ್ತಾರೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಥಳೀಯ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಲವು: ಆರ್.ಅಶೋಕ್ನೋಟು ಅಮಾನ್ಯೀಕರಣದ ನಂತರವೂ ಏಕೆ ನಕಲಿ ನೋಟು ಹಾವಳಿ ನಿಂತಿಲ್ಲ: ಪ್ರಿಯಾಂಕ್ ಖರ್ಗೆ ಮಹಿಳಾ ಸಚಿವರ ಆಯ್ಕೆ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ಡಿಸೆಂಬ‌ರ್ ಮೊದಲ ವಾರದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಸಾಧ್ಯತೆಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶ