LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News | Politics News

ಪ್ರತಾಪ್ ಸಿಂಹ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿಯ ವರ್ತನೆಯಿಂದ ಉದ್ಭವಿಸಿದ ಪರಿಸ್ಥಿತಿಗೆ ಸರ್ಕಾರವೇ ಪರೋಕ್ಷವಾಗಿ ಪ್ರಚೋದನೆ ನೀಡಿದಂತಾಗಿದೆ ಎಂದು ಹೇಳಿದ್ದಾರೆ.

ಗಣಪತಿ ವಿಸರ್ಜನಾ ಶೋಭಾಯಾತ್ರೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಶಾಂತಿಯುತವಾಗಿ ನಡೆದಿದೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಪ್ರತಾಪ್ ಸಿಂಹ ವಿರುದ್ಧದ ಪ್ರಕರಣವು ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯ ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವಂತಹ ಕ್ರಮವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರತಾಪ್ ಸಿಂಹ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ರದ್ದುಗೊಳಿಸಿ ಸರ್ಕಾರ ವಿವೇಕ ಮೆರೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಕಟ್ಟುವವರಿಗೆ ಗುಡ್‌ನ್ಯೂಸ್: ಬಳ್ಳಾರಿಯಲ್ಲಿ ಸೆ.25ರಿಂದ ‘ನಿರ್ಮಾಣ–2026’ ಪ್ರದರ್ಶನಗದಗ ತಾಲೂಕು ಬರ ಪೀಡಿತ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ ಎಚ್ಚರಿಕೆ‘ವಿಡಿಯೊ ಎಡಿಟ್ ಮಾಡಿ ಹರಿಬಿಡುವುದು ಬಿಜೆಪಿಯ ನೀಚತಂತ್ರ’: ಶಿವಲಿಂಗೇಗೌಡಪ್ರತಾಪ್ ಸಿಂಹ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿಜೋಸ್ ಬಟ್ಲರ್‌ ಹೊಸ ವಿಶ್ವ ದಾಖಲೆ; ಟಿ20ಯಲ್ಲಿ 15,000 ರನ್‌ ಪೂರೈಸಿದ ಮೊದಲ ಬ್ಯಾಟರ್‌ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿ: ಹೂವಿನಹಡಗಲಿಯಲ್ಲಿ ಬಿಗುವಿನ ವಾತಾವರಣಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!