LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಮಾಜಿ ಸಭಾಪತಿ, ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌ ತಿಪ್ಪಣ್ಣ ನಿಧನ 

ಬಳ್ಳಾರಿ: ವಿಧಾನ ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ ವಿರಶೈವ‌ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆದ ಎನ್‌. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ  ಕೊನೆಯುಸಿರೆಳೆದರು.

ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ನಾಳೆ, ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನೆಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಕೀಲರಾಗಿ ಹಲವು ವರ್ಷ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ವಿರೋಧ ಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿ ಕೆಲಸ ಮಾಡಿದ್ದರು.

ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡಿದ್ದಾರೆ.

2012ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ತಿಪ್ಪಣ್ಣ ಆಯ್ಕೆಯಾಗಿದ್ದರು. ಇದಕ್ಕೂ ಹಿಂದೆಯೂ ಅವರು ಮಹಾಸಭಾದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಳ್ಳಾರಿಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಹಾಗೂ ಇನ್ನಿತರ ಹುದ್ದೆಗಳಲ್ಲಿ ಅವರು 20 ವರ್ಷ ಕೆಲಸ ಮಾಡಿದ್ದಾರೆ

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ