LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ

ನವದೆಹಲಿ: ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗುರುವಾರ ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ.ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್‌ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.ಇನ್ನು ಮನಮೋಹನ್ ಸಿಂಗ್ ಭಾರತಕ್ಕೆ ಜಾಗತೀಕರಣವನ್ನು ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿದಾಗ ಭಾರತದ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಮುಕ್ತ ಮಾರುಕಟ್ಟೆಯೊಂದೇ ದೇಶದ ಮುಂದಿರುವ ಮಾರ್ಗ ಎಂದು ಬಲವಾಗಿ ನಂಬಿದ್ದ ಅವರು ಅದಕ್ಕೆ ಅನುಗುಣವಾಗಿ ಕಾರ್ಯ ಪ್ರವೃತ್ತರಾದರು. 1994-95ರ ಬಜೆಟ್‌ನಲ್ಲಿ ಭಾರೀ ಬದಲಾವಣೆಗೆ ಕೈಹಾಕಿದರು. ಭಾರತ ಇಂದು ವಿಶ್ವದ 5ನೇ ದೊಡ್ಡ ಆರ್ಥಿಕತೆ ಹೊಂದಿದ ಆಗಿದೆ ಎನ್ನುವುದಾದರೆ, ಅದಕ್ಕೆ ಸಿಂಗ್ ಹಾಕಿದ ಅಡಿಪಾಯವನ್ನು ಯಾರೂ ಮರೆಯುವಂತಿಲ್ಲ.ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.
ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ್ದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದ್ದರು. ಅವರ ಶೈಕ್ಷಣಿಕ ಸಾಧನೆ ಅವರನ್ನು ಪಂಜಾಬ್ ನಿಂದ ಇಂಗ್ಲೆAಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯಕ್ಕೆ ಕರೆದೊಯ್ಯಿತು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.
ಡಾ. ಮನಮೋಹನಸಿಂಗ್ ಅವರ ಶೈಕ್ಷಣಿಕ ಜ್ಞಾನ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಹಾಗೂ ದೆಹಲಿಯ ಪ್ರತಿಷ್ಠಿತ ಆರ್ಥಿಕ ಶಾಲೆಯಲ್ಲಿ ಬೋಧಕರಾಗಿ ಸಾಕಾರಗೊಂಡವು. ಯು.ಎನ್.ಸಿ.ಟಿ.ಎ.ಡಿ. ಸಚಿವಾಲಯದಲ್ಲಿ ಅವರು ಕೆಲಕಾಲ ಸೇವೆ ಸಲ್ಲಿಸಿದ್ದರು. ಇದರ ಫಲವಾಗಿ 1987ರಿಂದ 1990ರವರೆಗೆ ಅವರನ್ನು ಜೀನಿವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
1991ರಿಂದ 1996ರವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈ ಅವಧಿ ಸ್ವತಂತ್ರ ಭಾರತದ ಆರ್ಥಿಕ ಇತಿಹಾಸದಲ್ಲಿ ಒಂದು ಮಹತ್ವದ ತಿರುವು ಮೂಡಿತು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ