LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಹಲವರಿಗೆ ಗಾಯ

ಚನ್ನಪಟ್ಟಣ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇಂದು (ಸೋಮವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣವಾಗಿದೆ.

ಅಪಘಾತದ ವಿವರ:
ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರಿನತ್ತ ಸಾಗುತ್ತಿತ್ತು. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಈ ಘಟನೆ ನಡೆದಿದೆ. ಮುಂಜಾನೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಬಸ್ ವೇಗವಾಗಿ ಹೋಗಿ ಡಿವೈಡರ್‌ಗೆ ಗುದ್ದಿದೆ ಎನ್ನಲಾಗಿದೆ.

ಮೃತರ ಗುರುತು:
ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಪೊಲೀಸರು ಗುರುತಿಸಿದ್ದು, ಅವರು ಕೇರಳ ಹಾಗೂ ಬೆಂಗಳೂರಿನವರಾಗಿದ್ದಾರೆ:

ಮೊಹಮ್ಮದ್ ಫರಾನ್ (22) - ಕೋಝಿಕ್ಕೋಡ್, ಕೇರಳ.

ಸುಲ್ಫಿ (45) - ಕೇರಳ.

ರಶೀದ್ (45) - ಕಲಾಸಿಪಾಳ್ಯ, ಬೆಂಗಳೂರು.

ಸಾಕೇರ್ - ಆಡುಗೋಡಿ ಅಣ್ಣೆಪಾಳ್ಯ, ಬೆಂಗಳೂರು.

ಗಾಯಾಳುಗಳ ಸ್ಥಿತಿ:
ಅಪಘಾತದಲ್ಲಿ ಕೇರಳದ ಕಣ್ಣೂರು ಮೂಲದ ಅಬ್ದುಲ್ ಮತ್ತು ಅಲೇನ್ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸ್ ಭೇಟಿ: ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ