E-PAPER
28 Nov 2026, 12:10:14 PM|
Gold₹12654/gGold24K ₹12,654/g - 22K ₹11,589/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ಸಚಿವ ಸಂಪುಟದ ಖಾಲಿ ಸ್ಥಾನಗಳಲ್ಲಿ ಮಹಿಳೆ, ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳ ಪೈಕಿ ಒಂದನ್ನು ಮಹಿಳೆಗೆ ಹಾಗೂ ಮತ್ತೊಂದನ್ನು ಹಿಂದುಳಿದ ವರ್ಗಕ್ಕೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಗರದ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಾಗ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ. ನಾಗೇಂದ್ರ ಅವರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಗೇಂದ್ರ ನಿರಪರಾಧಿ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಅವರಿಗೆ ಕ್ಲೀನ್‌ಚಿಟ್ ಸಿಕ್ಕಿರುವ ವಿಚಾರವೂ ಇದೆ ಎಂದರು. ಆದರೆ, ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

ಮೈಸೂರಿನಲ್ಲಿ ತಮ್ಮ ಆಪ್ತ ಶಾಸಕರೊಂದಿಗೆ ಒಗ್ಗಟ್ಟು ಪ್ರದರ್ಶಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಯಾವಾಗ ಜಗಳವಾಡಿದ್ದೇವೆ? ಯಾವಾಗ ಬೇರೆ ಬೇರೆಯಾಗಿದ್ದೇವೆ ಎಂದು ಪ್ರಶ್ನಿಸುವ ಮೂಲಕ ತಮ್ಮ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಚರ್ಚೆಯನ್ನು ತಳ್ಳಿಹಾಕಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಕೇಳಿದಾಗ, ಈಗ ನಮ್ಮ ಸರ್ಕಾರ ಇಲ್ಲ. ನಾನು ಮುಖ್ಯಮಂತ್ರಿ ಅಲ್ಲ. ಸರ್ಕಾರದ ಮುಖ್ಯಸ್ಥರು ಡಿ.ಕೆ. ಶಿವಕುಮಾರ್ ಅವರಾಗಿದ್ದು, ಅವರೇ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಸಿದ್ದರಾಮಯ್ಯ, ಹೊಸ ಯೋಜನೆಗಳನ್ನು ಜಾರಿಗೊಳಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು ಅಥವಾ ಪೂರಕ ಅಂದಾಜು ಪಟ್ಟಿಯಲ್ಲಿ ಹಣ ಒದಗಿಸಬೇಕು. ಈ ವರ್ಷ ಹೊಸ ಕಾರ್ಯಕ್ರಮಗಳನ್ನು ಆರಂಭಿಸಲು ಅನುದಾನದ ಸಮಸ್ಯೆ ಎದುರಾಗಬಹುದು. ಮುಂದಿನ ವರ್ಷ ಅವುಗಳನ್ನು ಜಾರಿಗೊಳಿಸಬಹುದು. ಆದರೆ, ಇದರಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಅರ್ಥೈಸಬಾರದು ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹಸು ಭಾಗ್ಯ ಯೋಜನೆ ಜಾರಿಗೆ ತರುವ ವಿಚಾರವಾಗಿ ಮಾತನಾಡಿದ ಅವರು, ತಮ್ಮ ಸರ್ಕಾರದ ಅವಧಿಯಲ್ಲಿ ಪಶುಭಾಗ್ಯ, ಕ್ಷೀರಭಾಗ್ಯ ಹಾಗೂ ಕ್ಷೀರಧಾರೆ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಇಂತಹ ಯೋಜನೆಗಳನ್ನು ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ರಾಜ್ಯ ಸರ್ಕಾರ ನಡೆಸಲಿದೆ ಎಂದು ತಿಳಿಸಿದ ಅವರು, ಕ್ಷೇತ್ರ ಪುನರ್ವಿಂಗಡಣೆ ಕುರಿತು ಕೇಂದ್ರ ಸರ್ಕಾರ ಕರೆದಿರುವ ವಿಶೇಷ ಸಂಸತ್ ಅಧಿವೇಶನದ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಸಂಸದನಲ್ಲ ಎಂದು ಪ್ರತಿಕ್ರಿಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಎಪಿಎಂಸಿ ಮಾರುಕಟ್ಟೆ ಅಂಗಡಿಗಳ ಮೇಲೆ ಎಸಿ ದಾಳಿ :ಪಡಿತರ ಅಕ್ಕಿ ಮಿಶ್ರಣದ ಜಾಲ ಪತ್ತೆಪರೀಕ್ಷಾ ಸಮಯದಲ್ಲಿ ಪ್ರೌಢ ಶಾಲಾ ಶಿಕ್ಷಕರನ್ನು ಜನಗಣತಿಗೆ ನಿಯೋಜಿಸುವುದಿಲ್ಲ: ಸಚಿವ ಮಧು ಬಂಗಾರಪ್ಪಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ ಮೊಲಗಳ ಬೇಟೆ: ಮೂವರು ವಶಕ್ಕೆಮೇಕೆದಾಟು ಯೋಜನೆ: ತಮಿಳುನಾಡು ರಾಜ್ಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ಕ್ಷೇತ್ರ ಪುನರ್‌ವಿಂಗಡಣೆ-ಮಹಿಳಾ ಮೀಸಲು ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತುಸಚಿವ ಸಂಪುಟದ ಖಾಲಿ ಸ್ಥಾನಗಳಲ್ಲಿ ಮಹಿಳೆ, ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿ: ಸಿದ್ದರಾಮಯ್ಯಹಿರಿಯೂರು ಉಪ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಆತುರವಿಲ್ಲ - ಎಚ್.ಡಿ.ಕುಮಾರ ಸ್ವಾಮಿಚಿತ್ರನಟಿ ಸುಧಾರಣಿಗೆ ಜೀವಮಾನ ಸಾಧನೆ ಪ್ರಶಸ್ತಿಮುಖ್ಯಮಂತ್ರಿ ಜಪಾನ್‌ ನಲ್ಲಿ, ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ: ಬಿ.ವೈ. ವಿಜಯೇಂದ್ರಜನತಾ ಬಜಾರ್ ಅಧ್ಯಕ್ಷರಾಗಿ ವೆಂಕಟೇಶ್ ಹೆಗಡೆ ಅವಿರೋಧ ಆಯ್ಕೆ