LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವು

ರೈತರಿಗೆ ಶೀಘ್ರದಲ್ಲೇ ಕಾಲುವೆ ನೀರಿನ ಸಿಹಿಸುದ್ದಿ?

ಹೊಸಪೇಟೆ : ಮಲೆನಾಡು ಭಾಗದಲ್ಲಿ ಸುರಿದ ಮಳೆಯ ಪರಿಣಾಮ ವಿಜಯನಗರ ಜಿಲ್ಲೆ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಮಂಗಳವಾರ 1 ಲಕ್ಷ ಕ್ಯುಸೆಕ್‌ಗಿಂತ ಅಧಿಕ ದಾಖಲಾಗಿದ್ದು, ಜಲಾಶಯ ಇದೀಗ ಅರ್ಧದಷ್ಟು ಭರ್ತಿಯಾಗಿದೆ. ಇದೇ ಪ್ರಮಾಣದ ಒಳಹರಿವು ಇನ್ನೂ ನಾಲ್ಕೈದು ದಿನಗಳ ಕಾಲ ಮುಂದುವರಿದರೆ, ಜಲಾಶಯದ ನೀರಿನ ಸಂಗ್ರಹ 80 ಟಿಎಂಸಿ ಅಡಿಗೂ ಹೆಚ್ಚು ತಲುಪುವ ಸಾಧ್ಯತೆ ಇದೆ.

news_1785913662_0_819.webp

 

ಗರಿಷ್ಠ 105.788 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 53.64 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಈ ಬೆಳವಣಿಗೆ ಮೂರೂ ರಾಜ್ಯಗಳ 8 ಜಿಲ್ಲೆಗಳ ಸುಮಾರು 13 ಲಕ್ಷ ಎಕರೆ ಕೃಷಿಭೂಮಿಗೆ ಆಶಾಕಿರಣ ಮೂಡಿಸಿದ್ದು, ಮೊದಲ ಬೆಳೆಗೆ ಅಗತ್ಯವಿರುವ 90 ಟಿಎಂಸಿ ಅಡಿ ನೀರಿನ ಲಭ್ಯತೆ ಬಗ್ಗೆ ರೈತರಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಶೀಘ್ರವೇ ಕಾಲುವೆಗಳಿಗೆ ನೀರು?

ಜಲಾಶಯಕ್ಕೆ ಒಳಹರಿವು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯುವ ಸಾಧ್ಯತೆ ಇದೆ. ಸಭೆಯಲ್ಲಿ ಕಾಲುವೆಗಳಿಗೆ ನೀರು ಹರಿಸುವ ದಿನಾಂಕ ಹಾಗೂ ಪ್ರಮಾಣದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಜಲಾಶಯದಲ್ಲಿ ಕನಿಷ್ಠ 70 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು 20 ಸಾವಿರ ಕ್ಯುಸೆಕ್‌ಗಿಂತ ಹೆಚ್ಚಿದ್ದರೆ ಮಾತ್ರ ಮೊದಲ ಬೆಳೆಗೆ ಕಾಲುವೆಗಳಿಗೆ ನೀರು ಬಿಡುವ ನಿರ್ಧಾರಕ್ಕೆ ಬರಬಹುದು. ಇಲ್ಲವಾದರೆ ನೀರು ಹರಿಸುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಮಳೆ ವಿಳಂಬದ ಪರಿಣಾಮ

ಸಾಮಾನ್ಯವಾಗಿ ಉತ್ತಮ ಮಳೆಯ ವರ್ಷಗಳಲ್ಲಿ ಜೂನ್ ಅಂತ್ಯದ ವೇಳೆಗೆ ಜಲಾಶಯ ಭರ್ತಿಯಾಗಿ, ಜುಲೈ ಮೊದಲ ವಾರದಲ್ಲೇ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಈ ಬಾರಿ ಮುಂಗಾರು ವಿಳಂಬವಾದ ಕಾರಣ, ನೀರಾವರಿ ಆರಂಭವೂ ಸುಮಾರು ಒಂದೂವರೆ ತಿಂಗಳು ತಡವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಒಳಹರಿವು ಕುಸಿಯುವ ಆತಂಕವೂ ಇದೆ

ಇನ್ನೊಂದೆಡೆ, ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುತ್ತಿರುವ ಸೂಚನೆಗಳು ಕಂಡುಬಂದಿವೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಭಾಗದಲ್ಲಿ ಮಾತ್ರ ಸಾಧಾರಣ ಮಳೆ ದಾಖಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಇದೇ ಪರಿಸ್ಥಿತಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ತುಂಗಭದ್ರಾ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೈತರು ಈಗ ಜಲಾಶಯದ ಒಳಹರಿವು ಮತ್ತು ನೀರಾವರಿ ಸಲಹಾ ಸಮಿತಿಯ ಸಭೆಯತ್ತ ಕಾತರದಿಂದ ಕಾದು ನೋಡುತ್ತಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೋಸ್ ಬಟ್ಲರ್‌ ಹೊಸ ವಿಶ್ವ ದಾಖಲೆ; ಟಿ20ಯಲ್ಲಿ 15,000 ರನ್‌ ಪೂರೈಸಿದ ಮೊದಲ ಬ್ಯಾಟರ್‌ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿ: ಹೂವಿನಹಡಗಲಿಯಲ್ಲಿ ಬಿಗುವಿನ ವಾತಾವರಣಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆ