LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News | State News

ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ರಾಜ್ಯದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಕೇಂದ್ರದ ದೈನಂದಿನ ಹವಾಮಾನ ವರದಿ ಪ್ರಕಾರ, ಮಂಗಳವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಮಿಂಚು ಸಮೇತ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದ್ದು, ಗುಡುಗು-ಮಿಂಚು ಮತ್ತು ಬಿರುಗಾಳಿಯ ಸಾಧ್ಯತೆ ಇದೆ.

ಸೆಪ್ಟೆಂಬರ್ 30 ಮತ್ತು ಅ.1ರಂದು ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕೆಲವೆಡೆ ಭಾರೀ ಮಳೆಯ ಸಾಧ್ಯತೆಯೂ ಇದೆ. ನಾಗರಿಕರು ಮುನ್ನೆಚ್ಚರಿಕೆ ವಹಿಸಿ, ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಉಳಿದಂತೆ ನಿನ್ನೆ ನಟ್ಟಿರುಳು ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ವೈಟ್‌ಫೀಲ್ಡ್ ಮತ್ತು ಮಾರತ್ತಹಳ್ಳಿ ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ವಾಹನ ಸವಾರರು ನೀರಿನಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ.

ಇದೇ ವೇಳೆ ಮಲ್ಲೇಶ್ವರಂನಲ್ಲಿ ಬೃಹತ್ ಮರವೊಂದು ಕಾರುಗಳ ಮೇಲೆ ಬಿದ್ದಿದೆ. ಮರ ಬಿದ್ದು ಕಾರುಗಳಿಗೆ ಹಾನಿಯಾಗಿದ್ದು, ಸ್ಥಳೀಯರು ತಕ್ಷಣದ ಸಹಾಯಕ್ಕೆ ಮುಂದಾಗಿದ್ದಾರೆ. ಅಧಿಕಾರಿಗಳು ಮರ ತೆರವು ಕಾರ್ಯ ಕೈಗೊಂಡಿದ್ದಾರೆ. ನಗರದ ಹಲವು ಕಡೆಗಳಲ್ಲಿ ಮಳೆಯಿಂದ ಸಂಚಾರ ವ್ಯತ್ಯಯಗೊಂಡಿದ್ದು, ನಾಗರಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ರಾಘವೇಂದ್ರ ಹಿಟ್ನಾಳ್ 10 ಸಾವಿರ ಕೋಟಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ : ಗಣೇಶ್ ಹೊರತಟ್ನಾಳ್ ಸವಾಲ್8 ವರ್ಷದ ಬಾಲಕ: ಪೋಷಕರ ಪತ್ತೆಗೆ ಮನವಿ"ಪ್ರತಿ ಹೃದಯ ಬಡಿತವೂ ಮಹತ್ವದ್ದು” ಎಂಬ ಧ್ಯೇಯವಾಕ್ಯದೊಂದಿಗೆ ಇ.ಎಸ್.ಐ.ಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆಬಸವನ ಬಾಗೇವಾಡಿಯಲ್ಲಿ ಭೂಕಂಪನದಕ್ಷಿಣ ಒಳನಾಡಿನಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್‌ ಪ್ರತಿಭಟನೆನೈಸ್‌ ಹಗರಣ 2ಜಿ ಸ್ಪೆಕ್ಟ್ರಮ್‌, ಕಲ್ಲಿದ್ದಲು ಹಗರಣಕ್ಕಿಂತ ದೊಡ್ಡದು: ಎಚ್.ಡಿ. ಕುಮಾರ ಸ್ವಾಮಿಕರ್ನಾಟಕದ ನಕಲಿ ಔಷಧ ಜಾಲಕ್ಕೆ ವಿದೇಶಿ ನಂಟು!ಬಳ್ಳಾರಿ ಹೋಟೆಲ್‌ನಲ್ಲಿ ಬೆಂಕಿ! ತಪ್ಪಿದ ಭಾರೀ ಅನಾಹುತಲಾರಿ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು; ಮೂವರಿಗೆ ಗಾಯ