LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ವಿಭಾಗೀಯ ಪೀಠ ನೋಟೀಸ್!

ಬೆಂಗಳೂರು: ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಾಲೀಕ ದೇವರಾಜುಗೆ ನೋಟಿಸ್ ಜಾರಿ ಮಾಡಿದೆ.
ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದ್ದು, ಆ ಸಂಸ್ಥೆಯಿಂದ ಪಾರದರ್ಶಕ ತನಿಖೆಯಾಗುತ್ತಿಲ್ಲ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್​ ಏಕ ಸದಸ್ಯ ಪೀಠ ನಿರಾಕರಿಸಿತ್ತು.
ನಂತರ, ಸ್ನೇಹಮಯಿ ಕೃಷ್ಣ ಹೈಕೋರ್ಟ್​ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್​ ವಿಭಾಗೀಯ ಪೀಠ ಅರ್ಜಿಯ ಸಂಬಂಧ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜು, ಸಿಬಿಐ, ಕೇಂದ್ರ ಗೃಹ ಇಲಾಖೆ,‌ ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ನೀಡಿದೆ. ಏಪ್ರಿಲ್ 28ಕ್ಕೆ ವಿಚಾರಣೆ ಮುಂದೂಡಿದೆ.
ಮುಡಾದಲ್ಲಿ 130ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಹೀಗಾಗಿ, ಈ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಮೇ 7ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇಂದಿನಿಂದ ಮತ್ತೆ ವಿಚಾರಣೆ ಆರಂಭಿಸಿದೆ. ಲೋಕಾಯುಕ್ತ ಪೊಲೀಸರು ಸಿಎಂ ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್​ಚಿಟ್ ನೀಡಿತ್ತು.
ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್
ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿತ್ತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ