E-PAPER
17 Nov 2026, 05:25:32 AM|
Gold₹13462/gGold24K ₹13,462/g - 22K ₹12,340/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆ

ಬೆಂಗಳೂರು : ಹಿರಿಯೂರು ಉಪ ಚುನಾವಣೆಯ ಘೋಷಣೆಗೂ ಮುನ್ನವೇ ರಾಜಕೀಯ ಬೆಳವಣಿಗೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ನಡೆಸುತ್ತಿದ್ರೆ, ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ನಿರ್ಮಾಣವಾಗಿದೆ. ಒಂದೆಡೆ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ಲೆಕ್ಕಾಚಾರ ಹಾಕುತ್ತಿದ್ದರೆ, ಇನ್ನೊಂದೆಡೆ ಮಿತ್ರ ಪಕ್ಷ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ. ಹೀಗಾಗಿ ಹಿರಿಯೂರು ಉಪಸಮರಕ್ಕೂ ಮುನ್ನ ದೋಸ್ತಿ ಮಧ್ಯೆ ಪೈಪೆÇೀಟಿ ಶುರುವಾಗಿದ್ದು, ಮಿತ್ರ ಪಕ್ಷಗಳ ನಾಯಕರು ಬಹಿರಂಗವಾಗಿಯೇ ಟಿಕೆಟ್ ಬಗ್ಗೆ ಮಾತುಗಳನ್ನಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸ್ವತಃ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಕೆಲ ಖಡಕ್ ಸಲಹೆಗಳನ್ನು ನೀಡಿದ್ದಾರೆ.

ಅಶೋಕ್ ಮಾತಿಗೆ ಹೆಚ್​​ಡಿಕೆ ಬೇಸರ
ಹಿರಿಯೂರು ಟಿಕೆಟ್​​​ ಬಿಜೆಪಿಗೆ ನೀಡಬೇಕೆನ್ನುವ ವಿಪಕ್ಷ ನಾಯಕ ಆರ್ ಅಶೋಕ್ ಮಾತಿಗೆ ಬೇಸರ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ಏನು ಪರಿಸ್ಥಿತಿ ಇದೆ ಎಂದು ಬಿಜೆಪಿ ನಾಯಕರು ಅರ್ಥೈಸಿಕೊಳ್ಳಬೇಕು. ಉಪಚುನಾವಣೆಯಲ್ಲಿ ಅಭ್ಯರ್ಥಿ ಹಾಕುವ ಬಗ್ಗೆ ನನಗೆ ಪ್ರತಿμÉ್ಠ ಇಲ್ಲ. ಆ ಚುನಾವಣೆ ಗೆದ್ದರೇ ರಾಜ್ಯದಲ್ಲಿ ಮುಂದಿನ ಭವಿಷ್ಯ ಇದೆ. ಜನ ಏನು ನಿರೀಕ್ಷೆ ಮಾಡುತ್ತಿದ್ದಾರೆ ಅದನ್ನು ಪೆÇ್ರೀತ್ಸಾಹ ಮಾಡಬೇಕು. ಇಲ್ಲಿ ಬಿಜೆಪಿ-ಜೆಡಿಎಸ್​ನಿಂದ ನಿಲ್ಲಬೇಕು ಎಂಬುದು ಪ್ರಶ್ನೆ ಅಲ್ಲ. ಜನಾಭಿಪ್ರಾಯ ಸಂಗ್ರಹ ಮಾಡುವುದು ಎರಡು ಪಕ್ಷಗಳ ಜವಾಬ್ದಾರಿ. ನಾನು ಮಾತನಾಡಲು ತಯಾರಿದ್ದೇನೆ ಎಂದಿದ್ದಾರೆ.
ಆರ್ ಅಶೋಕ್ ಹೇಳಿದ್ದೇನು?
ಹಿರಿಯೂರು ಟಿಕೆಟ್​​​ ನಮ್ಮ ಪಕ್ಷಕ್ಕೆ ನೀಡಬೇಕು. ಟಿಕೆಟ್ ಕುರಿತು ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಮಾತನಾಡುತ್ತೇವೆ. ಜೆಡಿಎಸ್​ ಜೊತೆ ಕೇಂದ್ರ ನಾಯಕರು ಕೂಡ ಚರ್ಚೆ ಮಾಡ್ತಾರೆ. ಜೆಡಿಎಸ್​ ಮನವೊಲಿಸಿ ನಮ್ಮ ಪಕ್ಷಕ್ಕೇ ಟಿಕೆಟ್ ಕೊಡುವ ವಿಶ್ವಾಸವಿದೆ. ಸದ್ಯ ನಾವು ಬಿಜೆಪಿಗೇ ಟಿಕೆಟ್ ನೀಡಬೇಕೆಂದು ನಿರ್ಧರಿಸಿದ್ದೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾಯಕರಲ್ಲಿ ಗೊಂದಲ
ಡಿ ಸುಧಾಕರ್ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ದಗೊಳ್ಳುತ್ತಿದೆ. ಚುನಾವಣಾ ಘೋಷಣೆಗೂ ಮುನ್ನವೇ ಟಿಕೆಟ್ ಹಾಗೂ ಇನ್ನಿತರ ವಿಚಾರಗಳ ಕುರಿತಾಗಿ ಚರ್ಚೆಗಳು ಶುರುವಾಗಿವೆ. ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದರೆ, ಇನ್ನೊಂದೆಡೆ ಎನ್​​ಡಿಎ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ನಾಯಕರಲ್ಲೇ ಗೊಂದಲವಾಗಿದೆ. ಈಗಾಗಲೇ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದ್ರೆ, ಜೆಡಿಎಸ್ ಸ್ಪರ್ಧೆ ಬಗ್ಗೆ ರಾಜ್ಯ ಬಿಜೆಪಿಗೆ ಸ್ಪಷ್ಟತೆ ಸಿಕ್ಕಿಲ್ಲ. ಹಿರಿಯೂರು ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಡಬೇಕಾ? ಅಥವಾ ಬಿಜೆಪಿಯೇ ಸ್ಪರ್ಧಿಸಬೇಕಾ ಎಂಬ ಚರ್ಚೆಗಳು ನಡೆದಿವೆ. ಹೀಗಾಗಿ ಎನ್​​ಡಿಎ ಅಭ್ಯರ್ಥಿ ಯಾರು ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
ಇನ್ನೊಂದೆಡೆ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಡಿಕೆ ಶಿವಕುಮಾರ್ ಅವರಿಗೂ ಈ ಚುನಾವಣೆ ಪ್ರತಿμÉ್ಠಯಾಗಿದೆ. ಮತ್ತೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರಿಗೂ ಇದು ಮಹತ್ವದ ಉಪ ಚುನಾವಣೆಯಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದು, ಅನುಕಂಪದ ಮೇರೆಗೆ ಸುಧಾಕರ್ ಪುತ್ರ ಸುಹಾಸ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಥಳೀಯ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಲವು: ಆರ್.ಅಶೋಕ್ನೋಟು ಅಮಾನ್ಯೀಕರಣದ ನಂತರವೂ ಏಕೆ ನಕಲಿ ನೋಟು ಹಾವಳಿ ನಿಂತಿಲ್ಲ: ಪ್ರಿಯಾಂಕ್ ಖರ್ಗೆ ಮಹಿಳಾ ಸಚಿವರ ಆಯ್ಕೆ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ಡಿಸೆಂಬ‌ರ್ ಮೊದಲ ವಾರದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಸಾಧ್ಯತೆಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶ