LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಬಳ್ಳಾರಿಯಲ್ಲಿ ಭೀಕರ ಕೊಲೆ: ಮದುವೆ ಆದ ಕೆಲಗಂಟೆಗಳಲ್ಲಿ ಶವವಾದ ನವ ವಿವಾಹಿತ

ಬಳ್ಳಾರಿ : ಮದುವೆಯ ಸಂಭ್ರಮ, ಬಂಧು-ಬಳಗದ ಶುಭಾಶಯಗಳು, ಹೊಸ ಬದುಕಿನ ಕನಸು... ಇವೆಲ್ಲವೂ ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ ಅಂತ್ಯಗೊAಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ನಗರವನ್ನು ಬೆಚ್ಚಿಬೀಳಿಸಿದೆ. ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತ ನಬಿ ರಸೂಲ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ.

ಮದುವೆಯ ರಿಸೆಪ್ಷನ್ ಮುಗಿದು ಕೆಲವೇ ಹೊತ್ತಿನಲ್ಲಿ ಸ್ನೇಹಿತ ಕರೆ ಮಾಡಿದ್ದಾರೆ ಎಂದು ಹೇಳಿ ರಾತ್ರಿ ಸುಮಾರು 11.30 ಗಂಟೆಗೆ ಮನೆಯಿಂದ ಹೊರಟಿದ್ದ ರಸೂಲ್, ಮತ್ತೆ ಜೀವಂತವಾಗಿ ಮನೆಗೆ ಮರಳಲೇ ಇಲ್ಲ. ರಾತ್ರಿ ತಡವಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊAಡ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಕೊನೆಗೆ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ರಸೂಲ್ ಅವರ ಶವ ಪತ್ತೆಯಾಗಿದ್ದು, ಮದುವೆ ಮನೆಯನ್ನು ಕ್ಷಣಾರ್ಧದಲ್ಲೇ ಶೋಕ ಸಾಗರವಾಗಿಸಿದೆ.

ಮೃತ ನಬಿ ರಸೂಲ್ ವಿಚ್ಛೇದಿತ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದರು. ಸುಮಾರು 15 ದಿನಗಳ ಹಿಂದೆ ಇಬ್ಬರೂ ಮನೆಯಿಂದ ಹೊರಟಿದ್ದರು. ಬಳಿಕ ಮನೆಗೆ ಮರಳಿದಾಗ ರಸೂಲ್ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪಿ ಮದುವೆ ನೆರವೇರಿಸಿದ್ದರು. ಆದರೆ ಮಹಿಳೆಯ ಕುಟುಂಬ ಈ ಸಂಬAಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ರಸೂಲ್‌ಗೆ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರೆಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಈ ಹಿನ್ನೆಲೆ ಪ್ರೀತಿ ವಿವಾಹವೇ ಕೊಲೆಗೆ ಕಾರಣವಾಗಿರಬಹುದೇ? ಎಂಬ ಅನುಮಾನ ಬಲವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ಕಾರ್ಯಾಚರಣೆ ಆರಂಭಿಸಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ