E-PAPER
14 Nov 2026, 07:23:20 AM|
Gold₹13793/gGold24K ₹13,793/g - 22K ₹12,633/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

'ICC ಹಾಲ್ ಆಫ್ ಫೇಮ್ ' : ಧೋನಿ ಸೇರಿ ಏಳು ಮಂದಿಗೆ ಗೌರವ !

'ICC ಹಾಲ್ ಆಫ್ ಫೇಮ್ ' ಧೋನಿ ಸೇರಿ ಏಳು ಮಂದಿಗೆ ಗೌರವ !

ಭಾರತ ತಂಡದ ಹೆಮ್ಮೆಯ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಭಾರತದ 11  ನೇ ಹಾಲ್ ಆಫ್ ಫೇಮ್ ಆಟಗಾರ ಎನ್ನುವಂಥ ಗೌರವ ಲಭಿಸಿದೆ .

ಲಂಡನ್: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಏಳು ಮಂದಿ ICC ಹಾಲ್ ಆಫ್ ಫೇಮ್ ಗೌರವಕ್ಕೆ ಭಾಜನರಾಗಿದ್ದಾರೆ.

ಲಂಡನ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಐವರು ಪುರುಷರು ಮತ್ತು ಇಬ್ಬರು ಮಹಿಳಾ ಕ್ರಿಕೆಟಿಗರು ಸೇರಿದಂತೆ ಒಟ್ಟು ಏಳು ಮಂದಿಯನ್ನು ಐಸಿಸಿ 2025ರ ಹಾಲ್ ಆಫ್ ಫೇಮ್ ಗೆ ಸೇರಿಸಿದೆ.

ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್, ಹಾಶಿಮ್ ಆಮ್ಲಾ, ಆಸ್ಟ್ರೇಲಿಯಾದ ಮ್ಯಾಥ್ಯೋ ಹೇಡನ್, ನ್ಯೂಜಿಲೆಂಡ್ ನ ಡೇನಿಯಲ್ ವೆಟ್ಟೋರಿ, ಇಂಗ್ಲೆಂಡ್ ನ ಸಾರಾ ಟೇಲರ್ ಮತ್ತು ಪಾಕಿಸ್ತಾನದ ಸನಾ ಮಿರ್ ಐಸಿಸಿ 2025ರ ಹಾಲ್ ಆಫ್ ಫೇಮ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಧೋನಿ ಅವರ ಅದ್ಬುತ ನಾಯಕತ್ವ, ಸ್ಮರಣೀಯ ವೃತ್ತಿಜೀವನ ಹಾಗೂ ಕ್ರಿಕೆಟ್ ಗೆ ನೀಡಿದ ಕೊಡುಗೆಗಾಗಿ ಈ ಗೌರವ ನೀಡಲಾಗಿದೆ ಎಂದು ICC ಪ್ರಕಟಣೆಯಲ್ಲಿ ತಿಳಿಸಿದೆ.

ಧೋನಿ ಅವರ ನಾಯಕತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್, 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. 2004ರಲ್ಲಿ ಭಾರತ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಧೋನಿ ಅವರು 90 ಟೆಸ್ಟ್ ಪಂದ್ಯಗಳಲ್ಲಿ 4,876 ರನ್ ಗಳಿಸಿದ್ದರೆ 350 ಏಕದಿನ ಪಂದ್ಯಗಳಲ್ಲಿ 10, 773 ರನ್ ಗಳಿಸಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ 824 ವಿಕೆಟ್ ಕಬಳಿಸಿದ್ದಾರೆ.
ICC ಹಾಲ್ ಆಫ್ ಫೇಮ್ ' ಗೌರವ ಕುರಿತು ಪ್ರತಿಕ್ರಿಯಿಸಿರುವ ಮಹೇಂದ್ರ ಸಿಂಗ್ ಧೋನಿ, ಪ್ರಪಂಚದಾದ್ಯಂತದ ಕ್ರಿಕೆಟಿಗರ ಕೊಡುಗೆಗಳನ್ನು ಗುರುತಿಸುವ ಐಸಿಸಿ ಹಾಲ್ ಆಫ್ ಫೇಮ್‌ನಲ್ಲಿ ಹೆಸರಿಸಿರುವುದು ಗೌರವವಾಗಿದೆ. ಅಂತಹ ಸಾರ್ವಕಾಲಿಕ ಶ್ರೇಷ್ಠರ ಜೊತೆಗೆ ನನ್ನ ಹೆಸರನ್ನು ನೆನಪಿಸಿಕೊಳ್ಳುವುದು ಅದ್ಭುತ ಅನುಭವವಾಗುತ್ತಿದೆ. ಇದು ನನಗೆ ಎಂದೆಂದಿಗೂ ಒಂದು ವಿಶೇಷ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ