LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಭಾರತ ವಿಶ್ವದ 4ನೇ ಆರ್ಥಿಕ ಶಕ್ತಿ - ಶಾಸಕ ಗಾಲಿ ಜನಾರ್ದನರೆಡ್ಡಿ

ಹೊಸಪೇಟೆ : ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಸುಧಾರಣಾ ಕ್ರಮಗಳಿಂದಾಗಿ ಭಾರತ ಆರ್ಥಿಕ ಪ್ರಗತಿಯಲ್ಲಿ ವಿಶ್ವದ 4ನೇ ಸ್ಥಾನಕ್ಕೆ ತಲುಪಿದೆ. ಚಿದಂಬರಂ ಹೇಳಿದ್ದಕ್ಕಿಂತ 20 ವರ್ಷ ಮುನ್ನವೇ ಗುರಿಗೆ ಹತ್ತಿರವಾಗಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2047ರ ವೇಳೆ ಭಾರತ ಜಗತ್ತಿನ ಪ್ರಬಲ ರಾಷ್ಟ್ರಗಳ ಪೈಕಿ 3ನೇ ಸ್ಥಾನದಲ್ಲಿರಲಿದೆ ಎಂದು ಯುಪಿಎ ಸರ್ಕಾರದಲ್ಲಿ ಹಿಂದೆ ವಿತ್ತ ಸಚಿವರಾಗಿದ್ದ ಪಿ.ಚಿದಂಬರಂ ಹೇಳಿದ್ದರು. ಆದರೆ, ಎನ್‍ಡಿಎ ಸರ್ಕಾರದ ಸುಧಾರಣಾ ಕ್ರಮಗಳಿಂದಾಗಿ ಭಾರತ ಆರ್ಥಿಕ ಪ್ರಗತಿಯಲ್ಲಿ ವಿಶ್ವದ 4ನೇ ಸ್ಥಾನಕ್ಕೆ ತಲುಪಿದೆ. ಚಿದಂಬರಂ ಹೇಳಿದ್ದಕ್ಕಿಂತ 20 ವರ್ಷ ಮುನ್ನವೇ ಗುರಿಗೆ ಹತ್ತಿರವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ದಶಕದಲ್ಲಿ ನಿರೀಕ್ಷೆಗೂ ಮೀರಿ ಸಾಧನೆ ತೋರುತ್ತಿದೆ. ಜನಪರ ಕಾಳಜಿಯೊಂದಿಗೆ ರೂಪಿಸಿರುವ ಅನೇಕ ಕಾರ್ಯಕ್ರಮಗ ಳು ದೇಶದ ಪ್ರಗತಿಯನ್ನು ಉತ್ತೇಜಿಸಿವೆ. 2047ರ ವೇಳೆಗೆ ಭಾರತ ನಂ.1 ಸ್ಥಾನದಲ್ಲಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವರ್ಷದ ಬಜೆಟ್‍ನಲ್ಲಿ ಜನರ ಆದಾಯ ತೆರಿಗೆ ವಿನಾಯ್ತಿಯನ್ನು 12 ಲಕ್ಷ ರೂ. ವರೆಗೆ ವಿಸ್ತರಿಸಿತ್ತು. ಈ ಬಾರಿ ಹೊಸಪೇಟೆ ಸೇರಿದಂತೆ ದೇಶದ 60 ರೈಲು ನಿಲ್ದಾಣಗಳನ್ನು ಮೇಲ್ದಜೇಗೇರಿಸಲು 7,748 ಕೋಟಿ ರೂ. ಮೀಸಲಿಟ್ಟಿದೆ. ಪರಿಣಾಮ ಪ್ರವಾಸೋದ್ಯಮ ಸೇರಿದಂತೆ ಎಂದು ತಿಳಿಸಿದರು.
ಮಹಿಳೆಯರ ಖರೀದಿ ಸಾಮಥ್ರ್ಯವನ್ನು ಬೂಸ್ಟ್ ಮಾಡಲು ವಿವಿಧ ಮಾಲ್ ಮಾದರಿಯಲ್ಲಿ ದೇಶದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಶ್ರೀ ಮಾಲ್ ಆರಂಬಿಸುವುದಾಗಿ ಘೊಷಿಸಿದ್ದು, ಅದಕ್ಕಾಗಿ ತಲಾ 20 ಲಕ್ಷ ರೂ. ಮೀಸಲಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಈ ಬಾರಿಯೂ ಜನಪರ ಹಾಗೂ ದೇಶದ ಅಭಿವೃದ್ಧಿಯ ಗತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜನರಪರವಾದ ಬಜೆಟ್ ಮಂಡಿಸಿರುವುದು ಅಭಿನಂದನೀಯ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ್ ರೆಡ್ಡಿ, ಜಿಲ್ಲಾ ವಕ್ತಾರ ಅಶೋಕ್ ಜಿರೆ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಮಂಡಲ ಅಧ್ಯಕ್ಷರಾದ ಶಂಕರ್ ಮೇಟಿ, ಪ್ರಮುಖರಾದ ಜಗದೀಶ್ ಕಮಟಗಿ, ಮಧುಸೂಧನ್ ಉಪಸ್ಥಿತರಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ