LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಐತಿಹಾಸಿಕ ಹಂಪಿ ಸ್ಮಾರಕಗಳನ್ನು ಸಂರಕ್ಷಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ

ಹೊಸಪೇಟೆ:ಐತಿಹಾಸಿಕ ಹಂಪಿ ಸ್ಮಾರಕಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಮೀಸಲಿಡುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಹೇಳಿದರು.
ಹಂಪಿಯಲ್ಲಿ ವಿಶ್ವ ಪರಂಪರೆ, ಪ್ರವಾಸೋದ್ಯಮ ಮತ್ತು ಫಿಟ್ನೆಸ್ ಅನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ 21 ಕಿಮೀ ಮತ್ತು 12 ಕಿಮೀ ಮತ್ತು 5 ಕಿಮೀ ಓಟಗಳ ಗೋ ಹೆರಿಟೇಜ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವವಿಖ್ಯಾತ ಹಂಪಿ ನೆಮ್ಮಲ್ಲರ ಹೆಮ್ಮೆಯಾಗಿದೆ.ನಿಲ್ಲಿನ ಪ್ರಸಿದ್ಧ ಸ್ಮಾರಕಗಳು ಜಗತ್ತಿನ ಗಮನ ಸೆಳೆದಿವೆ. ಇಲ್ಲಿನ ಶಿಲ್ಪಕಲಾ ವೈಭವ ಎಲ್ಲರನ್ನು ಕೈ ಬೀಸಿ ಕರೆಯುತ್ತಿದೆ. ಇತಂಹ ಸ್ಮಾರಕಗಳನ್ನು ಸಂರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಎಂದರು.
ಹಂಪಿ ಗಾಯತ್ರಿ ಪೀಠದಿಂದ ಆರಂಭವಾದ ಗೋ ಹೆರಿಟೇಜ್ ಓಟದಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಕೃಷ್ಣ ದೇವಸ್ಥಾನ, ಕೃಷ್ಣ ಬಜಾರ್, ಶ್ರೀ ಚಂಡಿಕೇಶ್ವರ ಗುಡಿ, ಶಿವ ದೇವಾಲಯ, ರಾಣಿ ಸ್ನಾನಗೃಹ ಹಾಗೂ ತಳವಾರ್ ಘಟ್ಟ ಸೇರಿದಂತೆ ವಿವಿಧ ಸ್ಮಾರಕಗಳನ್ನು ದಾಟಿ ಓಟ ಪೂರ್ಣಗೊಳಿಸಿದರು. ರಾಜ್ಯ, ಹೊರ ರಾಜ್ಯದಿಂದ ಆಗಮಿಸಿದ ಪ್ರವಾಸಿಗರು ಈ ಓಟದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್., ಡಿವೈಎಸ್ಪಿ ಮಂಜುನಾಥ ಸೇರಿದಂತೆ ಇತರರು ಭಾಗವಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ