LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಡಿಕೆ ಸುರೇಶ್‌ಗೆ ಕೆಎಂಎಫ್ ಅಧ್ಯಕ್ಷಗಿರಿ ವೇದಿಕೆ ಸಜ್ಜು

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಮುಂದಿನ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ರವರನ್ನು ಆಯ್ಕೆ ಮಾಡಲು ವೇದಿಕೆ ಅಣಿಯಾಗಿದೆ.

ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಇಂದು ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಲದ ಹಾಲಿ ಅಧ್ಯಕ್ಷರಾಗಿರುವ ಮಾಜಿ ಶಾಸಕ ಭೀಮನಾಯಕ್ ಅವರ ಅವಧಿ ಜೂನ್‌ನಲ್ಲಿ ಅಂತ್ಯಗೊಳ್ಳಲಿದ್ದು, ನಂತರ ಈ ಅಧ್ಯಕ್ಷ ಗಾದಿಯನ್ನು ಡಿ.ಕೆ. ಸುರೇಶ್ ಅಲಂಕರಿಸಲಿದ್ದಾರೆ ಎಂಬ ಮಾತುಗಳಿಗೆ ಪುಷ್ಠಿ ಕೊಡುವಂತೆ ಡಿ.ಕೆ. ಸುರೇಶ್ ಅವರು ಇಂದು ಬೆಂಗಳೂರು ಹಾಲು ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ಕೆಎಂಎಫ್‌ನ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟೆ ಡಿ.ಕೆ. ಸುರೇಶ್ ಅವರು ಬೆಂಗಳೂರು ಹಾಲು ಮಹಾಮಂಡಲದ ನಿರ್ದೇಶ ಸ್ಥಾನದ ಚುನಾವಣಾ ಕಣಕ್ಕೆ ಇಳಿದಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹೊಸದರಲ್ಲೇ ಕೆಎಂಎಫ್ ಅಧ್ಯಕ್ಷ ಗಾದಿಗೆ ಡಿ.ಕೆ. ಸುರೇಶ್ ರವರನ್ನು ಪರಿಗಣಿಸುವ ಪ್ರಸ್ತಾಪಗಳು ಇದ್ದವು. ಆಗ ಅವರು ಸಂಸದರಾಗಿದ್ದ ಕಾರಣ ಮಾಜಿ ಶಾಸಕ ಭೀಮನಾಯಕ್‌ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.

ನಂತರ ನಡೆದ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಬಿಜೆಪಿಯ ಡಾ. ಸಿ.ಎನ್. ಮಂಜುನಾಥ್ ವಿರುದ್ಧ ಪರಾಭವಗೊಂಡಿದ್ದರು. ಇದಾದ ಬಳಿಕ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಒತ್ತಡಗಳು ಕಾಂಗ್ರೆಸ್‌ನಲ್ಲಿ ಇದ್ದವು.

ಹಾಲಿ ಅಧ್ಯಕ್ಷ ಭೀಮನಾಯಕ್ ಅವಧಿ ಪೂರ್ಣಗೊಳ್ಳದ ಕಾರಣ ಡಿ.ಕೆ. ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷ ಗಾದಿಗೆ ಆಯ್ಕೆ ಮಾಡುವುದು ಮುಂದಕ್ಕೆ ಹೋಗಿತ್ತು.

ಈಗ ಭೀಮನಾಯಕ್ ಅವಧಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ವೇದಿಕೆ ಅಣಿಯಾಗಿದೆ. ಈ ನಿಟ್ಟಿನಲ್ಲಿ ಡಿ.ಕೆ. ಸುರೇಶ್ ಅವರು ಕನಕಪುರ ಭಾಗದಿಂದ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.

ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾದ ನಂತರ ಮುಂದೆ ಜುಲೈನಲ್ಲಿ ನಡೆಯುವ ಕೆಎಂಎಫ್ ಅಧ್ಯಕ್ಷ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅಭ್ಯರ್ಥಿಯಾಗಲಿದ್ದಾರೆ.

ಕೆಎಂಎಫ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಡಿ.ಕೆ. ಸುರೇಶ್ ಮುಂದೆ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ನಿಶ್ಚಿತ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ