LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ರಾಜ್ಯದದ್ಯಾಂತ ವಿವಿಧೆಡೆ ಲೋಕಾಯುಕ್ತ ದಾಳಿ | ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ಶೋಧ ಕಾರ್ಯ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನಲ್ಲಿ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಎಇಇ ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ ಎಇಇ ಬೆಸ್ಕಾಂ ಆಗಿ ಕರ್ಯ ನರ್ವಮಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯರ್ಶಿೂನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.

ಬಾಗಲಕೋಟೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್ ಅವರ ಬಾಗಲಕೋಟೆ ಕಚೇರಿ, ಬೀಳಗಿ ತಾಲೂಕಿನ ತಳ್ಳಿಕೇರಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ವಿಜಯಪುರದಲ್ಲಿ ರ್ನಾಾಟಕ ಗೃಹ ಮಂಡಳಿ ಎಫ್‌ಡಿಎ ಶಿವಾನಂದ ಕೆಂಬಾವಿ ಅವರ ಮನೆ ಮತ್ತು ಫರ್ಮ್ಅ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ ಮತ್ತು ವಿಜಯಪುರ ಜಿಲ್ಲೆ ತಿಡಗುಂದಿ ಗ್ರಾಮದ ಬಳಿಯಿರುವ ಫರ್ಮ್ಗ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಡಿ. ಮಲ್ಲೇಶ್ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ್ ಸೇರಿದಂತೆ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.

ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಿಡಬ್ಲ್ಯೂಡಿ ಇಲಾಖೆಯ ಸೆಕ್ರೆಟರಿ ಇನ್ ಚೀಫ್ ಜಗನ್ನಾಥ್ ಹಲಿಂಗೆ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಕಲಬುರಗಿ ನಗರದ ಓಕಳಿ ಕ್ಯಾಂಪ್ ಬಡಾವಣೆಯಲ್ಲಿರುವ ಮನೆ, ಬೆಂಗಳೂರಿನ ಕಚೇರಿ, ಧನ್ನೂರ್ (ಕೆ) ಗ್ರಾಮದಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೀಳಗಿ ಪಂಚಾಯತ್ ರಾಜ್ ಇಲಾಖೆಯ ಅಕೌಂಟೆಂಟ್ ಮಲ್ಲೇಶ್ ದರ್ಗಕದ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಬಾಗಲಕೋಟೆ ಹಳೆ ವೀರಾಪುರ ರಸ್ತೆಯಲ್ಲಿರುವ ಮನೆ, ಮಲ್ಲೇಶ್ ಅವರ ಸ್ವಗ್ರಾಮ ತಳ್ಳಿಕೇರಿಯಲ್ಲಿರುವ ಮನೆ ಸೇರಿದಂತೆ ಒಟ್ಟು 3 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ