ಪೋತ್ನಾಳ:ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ರೈತರಿಗೆ ಪಂಪ್ ಮೋಟಾರ್ ವಿತರಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ನೀರಾವರಿ ಸೌಲಭ್ಯ ಹೆಚ್ಚಿದರೆ ರೈತರ ಆದಾಯವೂ ಹೆಚ್ಚುತ್ತದೆ. ಸರ್ಕಾರದ ಕಲ್ಯಾಣ ಯೋಜನೆಗಳು ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಫಲಾನುಭವಿಗಳು ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಉತ್ಪಾದನೆ ಹೆಚ್ಚಿಸುವತ್ತ ಗಮನ ಹರಿಸಬೇಕು" ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಅವರು ಹೇಳಿದರು
ಮಾನ್ವಿ ವಿಧಾನಸಭಾ ಕ್ಷೇತ್ರದ ಪೋತ್ನಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ₹3.50 ಕೋಟಿ ವೆಚ್ಚದಲ್ಲಿ 70 ಫಲಾನುಭವಿಗಳಿಗೆ ಪಂಪ್ ಮೋಟಾರ್ ವಿತರಣೆಗೆ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಚಾಲನೆ ನೀಡಿದರು.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಮೂಲಸೌಕರ್ಯ, ನೀರಾವರಿ ಹಾಗೂ ಮಹಿಳಾ ಸಬಲೀಕರಣ ಯೋಜನೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಈ ಯೋಜನೆಗಳ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ ಮಾತನಾಡಿ, ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದರು.
ಮಹಿಳಾ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಹೊಲಿಗೆ ಯಂತ್ರ ವಿತರಣೆಯಂತಹ ಯೋಜನೆಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಲಿವೆ. ಫಲಾನುಭವಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಸ್ವಂತ ಉದ್ಯಮ ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು 10 ಮಹಿಳಾ ಫಲಾನುಭವಿಗಳಿಗೆ ಒಲಿಗೆ ಯಂತ್ರ ನೀಡಿದರು .
ಈ ಕಾರ್ಯಕ್ರಮದಲ್ಲಿ ಮಾನ್ವಿ ನಗರ ಪ್ರಾಧಿಕಾರದ ಅಧ್ಯಕ್ಷರಾದ ಅಬ್ದುಲ್ ಗಪೂರ್ ಸಾಬ್, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಖಾಲಿದ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್ ಡಾ. ಬಸವರಾಜಪ್ಪ ಕುಮಾರಸ್ವಾಮಿ, ಶರ್ಪುದ್ದೀನ್, ಮಲ್ಲನಗೌಡ ಡಾ. ಗುರು ಶರ್ಮ, ಖಾಲಿದ್ ಗುರು, ಸುಭಾಷ್ ನಾಯಕ್, ದೊಡ್ಡಬಸಪ್ಪಗೌಡ ಪಂಪನಗೌಡ ಪೋತ್ನಾಳ,
ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.