LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಬಡವರ ಹಸಿವು ನೀಗಿಸುವುದೇ ನಮ್ಮ ಆದ್ಯತೆ

ಶಿಕಾರಿಪುರ : ರಾಜ್ಯ ಹಾಗೂ ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ಬಡವರ ದೀನದಲಿತರ ಪರವಾಗಿರುವ ಶಾಶ್ವತವಾಗಿರುವ ಎಲ್ಲರೂ ನೆನಪಿಟ್ಟುಕೊಳ್ಳುವ ಯೋಜನೆಗಳನ್ನ ಜಾರಿಗೆ ತರಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಕಚೇರಿ ಸಮೀಪ ಭಾನುವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 35 40 ವರ್ಷಗಳ ಹಿಂದೆ ಅನೇಕರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು, ಇಂದಿರಾ ಗಾಂಧಿಯವರು ಪ್ರಧಾನಮಂತ್ರಿಯಾಗಿದ್ದಾಗ 21 ಅಂಶವುಳ್ಳ ಯೋಜನೆಯನ್ನು ಜಾರಿಗೊಳಿಸಿದರು ಅದರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಅನ್ನ ದೊರಕುವಂತಹ ಯೋಜನೆಯನ್ನು ಜಾರಿಗೊಳಿಸಿದ್ದರು. ಅದೇ ರೀತಿ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯರವರ ಸರ್ಕಾರವಿದ್ದಾಗ ರಾಜ್ಯದ ಪ್ರತಿಯೊಬ್ಬ ಬಡವರು ರೈತರು ಕೂಲಿ ಕಾರ್ಮಿಕರು ಹಸಿವಿನಿಂದ ಮುಕ್ತರಾಗಬೇಕು ಎಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯೆಲ್ಲಿ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಹೊಂದಿರುವ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿಯನ್ನು ವಿತರಿಸಲಾಯಿತು. ಆದರೆ ಬಿಜೆಪಿಯವರು ಅವಧಿಯಲ್ಲಿ ಅದನ್ನು ಐದು ಕೆಜಿಗೆ ಮಟಕ ಕೊಡಿಸಿದ್ದರು ಆದರಿಗ ಮತ್ತೆ ನಮ್ಮ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯರವರ ಸರ್ಕಾರ ಬಂದ ನಂತರ ಪುನಃ 10  ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ದೇವರಾಜ್ ಅರಸುರವರು ಮುಖ್ಯಮಂತ್ರಿ ಯಾಗಿದ್ದಾಗ ಉಳುವವನೇ ಭೂಮಿ ಒಡೆಯ ಎಂಬ ಯೋಜನೆಯನ್ನು ಜಾರಿಗೆಗೊಳಿಸಿ ನಿಜವಾದ ರೈತರಿಗೆ ಭೂ ಹಕ್ಕನ್ನು ಕೊಡಿಸಿದರು. ನಂತರ ಎಸ್ ಬಂಗಾರಪ್ಪ ರವರು ಮುಖ್ಯಮಂತ್ರಿ ಯಾಗಿದ್ದಾಗ ಬಗರ್ ಹುಕುಂ ಸಮಿತಿಯನ್ನು ರಚಿಸಿ ಬಕರ್ ಹುಕುಂ ರೈತರಿಗೆ ಹಕ್ಕು ಪತ್ರ ಕೊಡಿಸುವ ವ್ಯವಸ್ಥೆ ಮಾಡಲಾಗಿತ್ತು. ಬಂಗಾರಪ್ಪ ರವರು ಮುಖ್ಯಮಂತ್ರಿ ಆಗಿದ್ದಾಗ ಸೂರು ಕಳೆದುಕೊಂಡವರಿಗೆ ಆಶ್ರಯ ಯೋಜನೆ ಅಡಿ ಸೂರನ್ನು ಕೊಡಿಸಿದರು. ದೇವಸ್ಥಾನಗಳಲ್ಲಿ ಪೂಜಿಸುವ ಅರ್ಚಕರಿಗಾಗಿ ಆರಾಧನಾ ಯೋಜನೆ ಜಾರಿಗೆಗೊಳಿಸಿದರು, ಕತ್ತಲಲ್ಲಿರುವವರಿಗೆ ಬೆಳಕು ನೀಡುವ ಉದ್ದೇಶಕ್ಕಾಗಿ ಜ್ಯೋತಿ ಕುಟೀರ ಎಂಬ ಯೋಜನೆಯನ್ನು ಜಾರಿಗೊಳಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾವಂತ ಯುವಕರಿಗೆ ಉದ್ಯೋಗ ಕೊಡಿಸುವುದಕ್ಕಾಗಿ ಗ್ರಾಮೀಣ ಕೃಪಾಕವನ್ನು ಜಾರಿಗೊಳಿಸಿ ಅನೇಕ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಫಲರಾದರು. ದೇಶದಲ್ಲಿಯೇ ಮೊದಲ ಬಾರಿಗೆ ರೈತರ ಜಮೀನುಗಳ ಬೋರ್ವೆಲ್ ಗಳಿಗೆ 10ಹೆಚ್ ಪಿ ಮೋಟಾರ್ ಪಂಪ್ಸೆಟ್ಟುಗಳಿಗೆ ಉಚಿತ ವಿದ್ಯುತ್ತನ್ನು ಕೊಟ್ಟರು. ಈ ರೀತಿ ಒಂದು ಬೋರ್ವೆಲ್ ಪಂಪ್ ಸೆಟ್ಟಿಗೆ ಉಚಿತ ವಿದ್ಯುತ್ ನೀಡುವುದರಿಂದ ವಾರ್ಷಿಕ 50ಸಾವಿರ ರೂಪಾಯಿ, ಅದರಂತೆ 1991ರಿಂದ ಇಲ್ಲಿಯವರೆಗೂ ಒಟ್ಟು 36ವರ್ಷಗಳ ಕಾಲ ಉಚಿತ ವಿದ್ಯುತ್ ಸರಬರಾಜು ಮಾಡಲಾಗಿದ್ದು, ಈಗ ಇದರ ಬೆಲೆ 18 ಲಕ್ಷದ ರೂಪಾಯಿ ಆಗಿದೆ ಈ ಯೋಜನೆಯು ಯಾರಿಂದಲೂ ತೆಗೆದುಹಾಕಲು ಆಗುವುದಿಲ್ಲ ಹೀಗೆ ಬಂಗಾರಪ್ಪನವರು 10 ಹಲವಾರು ಯೋಜನೆಗಳನ್ನು ರೈತ ಪರ ಬಡವರ ಪರ ಕೂಲಿಕಾರ್ಮಿಕ ಕಾರ್ಮಿಕರ ಪರ ಚಿಂತನೆ ನಡೆಸಿ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ರಾಜ್ಯದಲ್ಲಿ ನಾನು ಶಿಕ್ಷಣ ಸಚಿವನಾದ ಮೇಲೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗದಿದ್ದರೂ ಕೂಡ 57ಲಕ್ಷ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವಾದ ಹಾಲು ಮೊಟ್ಟೆ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಾಗಿದೆ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಖದಾನೆ ಖಾಲಿಯಾಗಿದೆ ಎಂದು ಟೀಕಿಸುತ್ತಿದ್ದಾರೆ ಖಜಾನೆ ಖಾಲಿ ಯಾಗದಿದ್ದರೆ ಕಳೆದ ವರ್ಷ 4ಲಕ್ಷ ಕೋಟಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯರವರು ಈ ವರ್ಷ ನಾಲ್ಕುವರೆ ಸಾವಿರ ಲಕ್ಷ ಕೋಟಿ ಬಜೆಟ್ ಮಂಡಿಸುವುದರೊಂದಿಗೆ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯರವರ ಐದು ಗ್ಯಾರಂಟಿ ಯೋಜನೆಯು ಪಕ್ಷಾತೀತವಾಗಿ ಜಾತ್ಯಾತೀತವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಒಂದು ಕೋಟಿ 37 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪುರಸಭೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳಿಂದ ಸನ್ಮಾನಿಸಲಾಯಿತಲ್ಲದೇ, ಕಾರ್ಯಕ್ರಮದ ನಂತರ ಅಧಿಕಾರಿಗಳೊಂದಿಗೆ ಕಾರ್ಯಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪನವರು ಆಹಾರ ಸವಿದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯರಾದ ಗೋಣಿ ಮಾಲತೇಶ್, ಪುಷ್ಪ ಶಿವಕುಮಾರ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಪುರಸಭಾ ಮಾಜಿ ಸದಸ್ಯ ಮಯೂರ್ ಉಳ್ಳಿ ದರ್ಶನ್, ಮುಖಂಡರಾದ ಬಡಗಿ ಪಾಲಾಕ್ಷಪ್ಪ, ಈರೇಶ್ ಎನ್ ವಿ, ರಾಘವೇಂದ್ರ ನಾಯ್ಕ್, ಶಿವು ನಾಯ್ಕ್, ಸಾಗರ ಉಪವಿಭಾಗಾಧಿಕಾರಿ ಭರತ್, ತಹಶೀಲ್ದಾರ್ ವಾಣಿ, ಪುರಸಭಾ ಮುಖ್ಯ ಅಧಿಕಾರಿ ಭರತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ