E-PAPER
23 Nov 2026, 02:12:44 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ 12 ಶಾಸಕರಿಗೆ ರಾಜಕೀಯ ಅಧಿಕಾರ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 12 ಮಂದಿ ಹಿರಿಯ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಉಳಿದ ಇಬ್ಬರು ಶಾಸಕರು ಹಾಗೂ ಒಬ್ಬರು ವಿಧಾನಪರಿಷತ್‌ ಸದಸ್ಯರಿಗೆ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸಲಾಗಿದೆ. ಪ್ರಮುಖವಾಗಿ ಮಾಜಿ ಸಚಿವ ಹಾಗೂ ಮೈಸೂರು ಭಾಗದ ಅಲ್ಪ ಸಂಖ್ಯಾತರ ಪ್ರಭಾವಿ ನಾಯಕ ತನ್ವೀರ್‌ ಸೇಠ್‌ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣ ಅವರನ್ನು ಸರ್ಕಾರದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ವಿಧಾನಪರಿಷತ್ತಿಗೆ ಮಂಜುನಾಥ್‌ ಭಂಡಾರಿ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
ರಾಜ್ಯದ ವಿವಿಧ ನಿಗಮ ಮಂಡಳಿಗಳು ಹಾಗೂ ಪ್ರಮುಖ ಸಾಂವಿಧಾನಿಕ ಮತ್ತು ರಾಜಕೀಯ ಹುದ್ದೆಗಳಿಗೆ 18 ಮಂದಿ ಕಾಂಗ್ರೆಸ್ಸಿಗರನ್ನು ನೇಮಿಸಲು ಕಾಂಗ್ರೆಸ್‌‍ ಹೈಕಮಾಂಡ್‌ ಅನುಮತಿಸಿದೆ. ಅದರಲ್ಲಿ 14 ಮಂದಿ ವಿಧಾನಸಭೆಯ ಸದಸ್ಯರು, ಒಬ್ಬರು ವಿಧಾನಪರಿಷತ್‌ ಸದಸ್ಯರು ಹಾಗೂ ಮೂವರು ಕಾಂಗ್ರೆಸ್‌‍ ನಾಯಕರಿದ್ದಾರೆ.
ನೇಮಕಾತಿ ಪಟ್ಟಿಯ ಪ್ರಕಾರ, ಆನೇಕಲ್‌ ಶಾಸಕ ಬಿ. ಶಿವಣ್ಣ ಅವರಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಶಿವಣ್ಣ ಮೂರು ಬಾರಿ ಶಾಸಕರಾಗಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಈಗಾಗಲೇ ಶಿವಣ್ಣ ಮಂಡಲಿಯ ಅಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಂಡು ಕೆಲಸ ನಿರ್ವಹಿಸುತ್ತಿದ್ದಾರೆ. ತಿಪಟೂರು ವಿಧಾನಸಭಾ ಕ್ಷೇತ್ರದ ಕೆ. ಷಡಕ್ಷರಿ ಅವರಿಗೆ ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಷಡಕ್ಷರಿ ಕೂಡ ಮೂರು ಬಾರಿ ಶಾಸಕರಾಗಿದ್ದರು. ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟು ಲಾಬಿ ನಡೆಸುವಾಗ ಅವರ ಆರೋಗ್ಯ ಹದಗೆಟ್ಟಿತ್ತು.
ಕಾಂಗ್ರೆಸ್‌‍ನ ಹಿರಿಯ ನಾಯಕ ಪಿ.ಎಂ. ಅಶೋಕ್‌ ಅವರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಾದ ಪಿ.ಎಂ.ಅಶೋಕ್‌ ಮೂರು ಬಾರಿ ಶಾಸಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಪರಮಾಪ್ತರೆಂದು ಗುರುತಿಸಿಕೊಂಡಿದ್ದರು.
5 ಬಾರಿ ಶಾಸಕರಾಗಿರುವ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದರು. ಈವರೆಗೂ ಸಚಿವಸ್ಥಾನ ದೊರೆಯದೇ ಇರುವುದಕ್ಕೆ ಹಂಪನಗೌಡ ಒಳಗೊಳಗೆ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಅವರಿಗೆ ನಿಗಮ ಮಂಡಳಿಗೆ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸುವ ಪ್ರಯತ್ನ ನಡೆದಿದೆ. ಮೂರು ಬಾರಿ ಶಾಸಕರಾಗಿರುವ ಎಸ್‌‍.ಎನ್‌. ಸುಬ್ಬಾರೆಡ್ಡಿ ಅವರಿಗೆ ಮೈಸೂರು ಸೇಲ್ಸ್ ಇಂಟರ್‌ ನ್ಯಾಷನಲ್‌‍ ಲಿಮಿಟೆಡ್‌ ಅಧ್ಯಕ್ಷ ಸ್ಥಾನ, ಕೊಳ್ಳೇಗಾಲ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿರುವ ಎ.ಆರ್‌. ಕೃಷ್ಣಮೂರ್ತಿ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ.
ದಾವಣಗೆರೆ ಹೊನ್ನಾಳಿ ಕ್ಷೇತ್ರದ ಶಾಸಕ ಡಿ.ಜಿ. ಶಾಂತನಗೌಡ ಅವರಿಗೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಶಾಂತನಗೌಡ ಕೂಡ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತರೀಕೆರೆ ಕ್ಷೇತ್ರವನ್ನು ಎರಡನೇ ಬಾರಿ ಪ್ರತಿನಿಧಿಸುತ್ತಿರುವ ಜಿ.ಎಚ್‌. ಶ್ರೀನಿವಾಸ್‌‍ ಅವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ, ಬೈಲಮಂಗಳ ಕ್ಷೇತ್ರವನ್ನು ಎರಡನೇ ಬಾರಿ ಪ್ರತಿನಿಧಿಸುತ್ತಿರುವ ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ನವಲಗುಂದ ಕ್ಷೇತ್ರವನ್ನು ಎರಡನೇ ಬಾರಿ ಪ್ರತಿನಿಧಿಸುತ್ತಿರುವ ಎನ್‌.ಎಚ್‌. ಕೋನರಡ್ಡಿ ಅವರಿಗೆ ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಸ್ಥಾನ, ರಾಯಚೂರು ಕ್ಷೇತ್ರವನ್ನು ಎರಡನೇ ಬಾರಿ ಪ್ರತಿನಿಧಿಸುತ್ತಿರುವ ಬಸನಗೌಡ ಪಾಟೀಲ್‌ ದದ್ದಲ್‌ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಕಲಬುರಗಿ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿರುವ ಅಲ್ಲಮಪ್ರಭು ಪಾಟೀಲ್‌ ಅವರಿಗೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಉಳಿದಂತೆ ಕಾಂಗ್ರೆಸ್‌‍ ನಾಯಕಾರದ ಶ್ಯಾಮ್‌ ನಾಟೇಕರ್‌ ಅವರಿಗೆ ಕರ್ನಾಟಕ ಸಾಂಬಾರ ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ, ಎಚ್‌.ಸಿ. ಲಲಿತ್‌ ರಾಘವ್‌ ಅವರಿಗೆ ಕರ್ನಾಟಕ ವಿದ್ಯುತ್‌ ಕಾರ್ಖಾನೆ ನಿಯಮಿತದ ಅಧ್ಯಕ್ಷ ಸ್ಥಾನ ಹಾಗೂ ಸುಭಾಷ್‌ ರಾಥೋಡ್‌ ಅವರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್‌‍ ಹೈಕಮಾಂಡ್‌ ಅನುಮೋದನೆ ನೀಡಿದೆ.
ಈ ಕುರಿತು ಅಖಿಲ ಭಾರತ ಕಾಂಗ್ರೆಸ್‌‍ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಕರ್ನಾಟಕದ ವಿವಿಧ ಮಂಡಳಿ ಹಾಗೂ ನಿಗಮಗಳಿಗೆ ಅಧ್ಯಕ್ಷರ ನೇಮಕಾತಿ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಕಾಂಗ್ರೆಸ್‌‍ ಅಧ್ಯಕ್ಷರು ಒಪ್ಪಿಗೆ ಸೂಚಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಿದ್ದಾರೆ. ಈ ನೇಮಕಾತಿಗಳ ಮೂಲಕ ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಪಕ್ಷದ ಶಾಸಕರು ಹಾಗೂ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡುವ ಪ್ರಕ್ರಿಯೆಗೆ ಕಾಂಗ್ರೆಸ್‌‍ ಹೈಕಮಾಂಡ್‌ ಅನುಮೋದನೆ ನೀಡಿದಂತಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀರಿನ ಮಿತಬಳಕೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿಜಯೇಂದ್ರ ಸವಾಲುಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ 12 ಶಾಸಕರಿಗೆ ರಾಜಕೀಯ ಅಧಿಕಾರವಿಶ್ವಗುರು ಬಸವಣ್ಣಗೆ ಅಪಮಾನ: ದೇಶ ತೊರೆಯಲೆತ್ನಿಸಿದ ರವಿಹಂಜ್‌ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧನ15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಜನವರಿ 18 ರಿಂದ ಪರೀಕ್ಷೆ ಆರಂಭಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯನಗರಗಳ ಅಭಿವೃದ್ಧಿಗೆ ವಿಶೇಷ ಒತ್ತು: ರಸ್ತೆಗಳಿಗೆ ಹೊಸ ಗ್ರಿಡ್‌ ವ್ಯವಸ್ಥೆ - ಡಿ.ಕೆ. ಶಿವಕುಮಾರ್‌ಬರಗಾಲದ ಸಂಕಷ್ಟಕ್ಕೆ ಧೃತಿಗೆಡದಂತೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಬೇಕು: ಸಂಸದ ಈ. ತುಕಾರಾಮ್ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್ಸ್ಥಳೀಯ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಲವು: ಆರ್.ಅಶೋಕ್